ಶಿವಮೊಗ್ಗ : ತ್ಯಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅಮುಕೂಲಕ್ಕಾಗಿ ಹುಲಿ- ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯು ಡಿ.೨೭ ರ ಮಂಗಳವಾರ ಸಹ ತೆರೆದಿರುತ್ತದೆ. ಪ್ರವಾಸಿಗರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ಹುಲಿ ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.
ಉದ್ಯೋಗ ಮೇಳ
ಶಿವಮೊಗ್ಗ ಕರ್ನಾಟಕ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಡಿ. 28 ರಂದು ಬೆಳಗ್ಗೆ 10.00 ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2 ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಿದೆ.
ಉದ್ಯೋಗ ಮೆರಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿ ತೆಗೆದುಕೊಂಡು ಸಂದರ್ಶನದಲ್ಲಿ ಭಾಗವಹಿಸಬಹುದು. ಪ್ರವೇಶ ಉಚಿತವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂ. ಸಂ.: 08182-255293/ 9380663606/ 9482023412/ 9535312531 ಗಳನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.