ಬೆಳಗಾವಿ: ಸುವರ್ಣಸೌಧದಲ್ಲಿ ನಡೆಯುತ್ತಿರು ಚಳಿಗಾಲ ಅಧಿವೇಶನ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಾಸ್ಕ್ ಧರಿಸುವಂತೆ ಸೂಚನೆ ನೀಡಿದರು.
ಕೋವಿಡ್ ಆತಂಕದ ಹಿನ್ನಲೆ ಯಾರು ಮಾಸ್ಕ್ ಧರಿಸಿಲ್ಲ ಅವರು ತರಿಸಿಕೊಂಡು ಮಾಸ್ಕ್ ಧರಿಸಿ ಎಂದು ಸೂಚನೆ ನೀಡಿದರು.
ಇನ್ನು ವಿಧಾನಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಕೊಡಗು ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ವಿಚಾರವಾಗಿ ಪರಿಷತ್ನಲ್ಲಿ ಪ್ರಸ್ತಾಪವಾಗಿತ್ತು. ಸುಜಾ ಕುಶಾಲಪ್ಪ ಪ್ರಸ್ತಾಪಿಸಿದ ವಿಷಯದ ಮೇಲೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, 450 ಹಾಸಿಗೆಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ನಡೆಯುತ್ತಿದೆ. 300 ಹಾಸಿಗೆ ಬೋಧಕ ಆಸ್ಪತ್ರೆ ಈಗಾಗಲೇ ಇದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪ್ರಸ್ತಾವ ರಾಜ್ಯ ಸರ್ಕಾರದ ಮುಂದಿಲ್ಲ. ವಿರಾಜಪೇಟೆ, ಮಡಿಕೇರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪ್ರಸ್ತಾವ ಇಲ್ಲ ಎಂದರು.