ಬೆಂಗಳೂರು: ರಾಜ್ಯ ಸರ್ಕಾರದಿಂದ ಬೆಂಗಳೂರಿಗೆ ಹೊಸ ಗೈಡ್ ಲೈನ್ಸ್ ರಿಲೀಸ್ ಮಾಡಿದೆ. ಇಂದು ಕೋವಿಡ್ ಬಗ್ಗೆ ಕುರಿತು ಸಭೆ ನಡೆಸಲಾಗಿತ್ತು ಈ ಸಭೆಯಲ್ಲಿ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.
ನಗರದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಕೊರೊನಾ ನಿಯಂತ್ರಣಕ್ಕೆ ಹಲವು ಕ್ರಮಗಳನ್ನ ಕೈಗೊಳ್ಳಲಾಗಿದೆ. ಎಲ್ಲಾ ಥಿಯೇಟರ್ ಗಳಲ್ಲೂ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಶಾಲಾ- ಕಾಲೇಜುಗಳಲ್ಲಿ ಮಾಸ್ಕ್ ಕಡ್ಡಾಯವಾಗಿದೆ. ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಕೋವಿಡ್ ಸಭೆ ಬಳಿಕ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ನಿಯಮ ಪಾಲನೆ ಮಾಡಬೇಕು. ಕೊರೊನಾ ನಿಯಂತ್ರಣಕ್ಕೆ ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದರು.ಸಿನಿಮಾ ಥಿಯೇಟರ್ ಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಶಾಲಾ- ಕಾಲೇಜುಗಳಲ್ಲಿ ಸ್ಯಾನಿಟೈಸರ್ ಬಳಸಬೇಕು ಎಂದು ಎಂದರು . ಒಳಾಂಗಣ ಕಾರ್ಯಕ್ರಮದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಹೇಳಿದ್ದಾರೆ.