ದಕ್ಷಿಣಕನ್ನಡ : ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಕೋವಿಡ್ ಸಭೆ ಇಂದು ನಡೆದಿದ್ದು, ಸಭೆ ಬಳಿಕ ಹೊಸ ಗೈಲೈನ್ಸ್ಗಳನ್ನು ಹೊರಡಿಸಿದೆ ಈ ಬೆನ್ನಲ್ಲೆ ಮಂಗಳೂರು ಜಿಲ್ಲೆಯಾದ್ಯಂತ ಕಡ್ಡಾಯವಾಗಿ ಕೋವಿಡ್ ನಿಯಮ ಪಾಲಿಸಿ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂಎನ್ ಆದೇಶ ಹೊರಡಿಸಿದ್ದಾರೆ.
BIGG NEWS : ‘ ಬೆಂಗಳೂರಲ್ಲಿ 60% ಮಂದಿ ಬೂಸ್ಟರ್ ಡೋಸ್ ‘ ಪಡೆಯೋದು ಬಾಕಿ ಇದೆ : ತುಷಾರ್ ಗಿರಿನಾಥ್ ಸ್ಪಷ್ಟನೆ
ಹೊಸ ವರ್ಷಾವರಣೆಯ ಸಂರ್ಭದಲ್ಲಿ ಪಬ್, ಬಾರ್, ರೆಸ್ಟೋರೆಂಟ್, ಸಿನಿಮಾ ಹಾಲ್, ಶಾಪಿಂಗ್ ಮಾಲ್, ಕಚೇರಿಗಳು, ಬಸ್, ರೈಲು, ಮೆಟ್ರೋ, ವಿಮಾನಯಾನದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿದೆ.
ವಿಶೇಷವಾಗಿ ವೃದ್ದರು, ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು, ಒಳಾಂಗಣದಲ್ಲಿದ್ದಾಗಲೂ ಮಾಸ್ಕ್ ಧರಿಸಬೇಕು. ಅರ್ಹರೆಲ್ಲರೂ ಕೋವಿಡ್-19 ಲಸಿಕೆಯ ಪ್ರಿಕಾಶನರಿ ಡೋಸ್ನ್ನು ಶೀಘ್ರ ತೆಗೆದುಕೊಳ್ಳಬೇಕು. ಉಸಿರಾಟದ ಸಮಸ್ಯೆ ಹಾಗೂ ಕೋವಿಡ್-19 ಸೋಂಕಿನ ಲಕ್ಷಣ ಹೊಂದಿರುವವರು, ಸ್ವಯಂ ಪ್ರತ್ಯೇಕವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು
ಫಲಿತಾಶದ ಆಧಾರದ ಮೇಲೆ ಚಾಲ್ತಿಯಲ್ಲಿರುವ ಪ್ರಮಾಣೀಕೃತ ಶಿಷ್ಟಾಚಾರದನ್ವಯ ಕ್ರಮಗಳನ್ನು ಪಾಲಿಸಬೇಕು. ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಮಧ್ಯಮ ಪ್ರಮಾಣದ ಪ್ರಾಣಾಯಾಮ, ವ್ಯಾಯಾಮ, ಉಸಿರಾಟದ ವ್ಯಾಯಾಮ, ಧ್ಯಾನ ಮಾಡಬಹುದು.
BIGG NEWS : ‘ ಬೆಂಗಳೂರಲ್ಲಿ 60% ಮಂದಿ ಬೂಸ್ಟರ್ ಡೋಸ್ ‘ ಪಡೆಯೋದು ಬಾಕಿ ಇದೆ : ತುಷಾರ್ ಗಿರಿನಾಥ್ ಸ್ಪಷ್ಟನೆ
ಇನ್ನು ಸಭೆ ಸಮಾರಂಭಗಳ ಆಯೋಜಕರು ಕೆಲವೊಂದು ಅಗತ್ಯ ಮಾರ್ಗಸೂಚಿಗಳನ್ನು ಪಾಲಿಸಬೇಕು. ಸಾರ್ವಜನಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆದಷ್ಟು ಹೊರಾಂಗಣದಲ್ಲಿ ಮತ್ತು ಒಳ್ಳೆಯ ಗಾಳಿ-ಬೆಳಕಿನ ವ್ಯವಸ್ಥೆ ಇರುವ ಸ್ಥಳಗಳಲ್ಲಿ ಹಗಲು ಹೊತ್ತಿನಲ್ಲಿ ನಡೆಸುವುದರಿಂದ ಆರೋಗ್ಯದ ಮೇಲೆ ಮುಂಜಾನೆ ಹಾಗೂ ಸಂಜೆಯ ಶೀತ ಗಾಳಿಯ ಪರಿಣಾಮವನ್ನು ತಡೆಗಟ್ಟಬಹುದು.
ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದ್ದು, ದೈಹಿಕ ಅಂತರ ಪಾಲನೆ ಅತೀ ಅಗತ್ಯ. ಕೈಗಾರಿಕಾ ಸಂಸ್ಥೆಗಳಲ್ಲಿ, ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬಂದಿ ಕಡ್ಡಾಯವಾಗಿ ದೈಹಿಕ ಅಂತರ ಕಾಯ್ದುಕೊಳ್ಳುವುದರೊಂದಿಗೆ ಮಾಸ್ಕ್ ಧರಿಸಬೇಕು.
ಹೆಚ್ಚಿನ ಜನರ ಗುಂಪುಗೂಡುವಿಕೆಯನ್ನು, ವಿಶೇಷವಾಗಿ ಒಳಾಂಗಣದಲ್ಲಿ ಕಟ್ಟುನಿಟ್ಟಾಗಿ ತಡೆಗಟ್ಟಬೇಕು. ಅಲ್ಲದೆ ಮುಂದಿನ ದಿನಗಳಲ್ಲಿ ಸರ್ಕಾರ ಹೊರಡಿಸುವ ಎಲ್ಲಾ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.
BIGG NEWS : ‘ ಬೆಂಗಳೂರಲ್ಲಿ 60% ಮಂದಿ ಬೂಸ್ಟರ್ ಡೋಸ್ ‘ ಪಡೆಯೋದು ಬಾಕಿ ಇದೆ : ತುಷಾರ್ ಗಿರಿನಾಥ್ ಸ್ಪಷ್ಟನೆ