ನವದೆಹಲಿ: ಕರ್ನಾಟಕದೊಂದಿಗೆ ನಡೆಯುತ್ತಿರುವ ಗಡಿ ವಿವಾದದ (Border Row With Karnataka) ನಡುವೆಯೂ ತಮ್ಮ ಸರ್ಕಾರವು ಒಂದು ಇಂಚು ಭೂಮಿಗಾಗಿಯೂ ಹೋರಾಡಲಿದೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ (DCM Devendra Fadnavis) ಹೇಳಿಕೆ ನೀಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಮಹಾರಾಷ್ಟ್ರ ವಿಧಾನಸಭೆಯಲ್ಲಿ(Maharashtra Assembly) ಮಾತನಾಡಿದ ಫಡ್ನವೀಸ್, ಕರ್ನಾಟಕದಲ್ಲಿರುವ ಮರಾಠಿ ಭಾಷಿಕ ಜನರಿಗೆ ನ್ಯಾಯ ಸಿಗುವಂತೆ ಮಾಡಲು ರಾಜ್ಯ ಸರ್ಕಾರ ಏನು ಬೇಕಾದರೂ ಮಾಡಲು ಸಿದ್ಧವಿದೆ ಎಂದಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ(Winter session) ಗಡಿ ಸಮಸ್ಯೆ ಪ್ರತಿಧ್ವನಿಸಿತು. ಪ್ರತಿಪಕ್ಷಗಳು ಈ ವಿಷಯದ ಬಗ್ಗೆ ನಿರ್ಣಯಕ್ಕೆ ಒತ್ತಾಯಿಸಿದವು.
ಗುರುವಾರ ಕರ್ನಾಟಕ ವಿಧಾನಸಭೆಯು (Karnataka Assembly) ಮಹಾರಾಷ್ಟ್ರದೊಂದಿಗಿನ ಗಡಿ ರೇಖೆಯ ಕುರಿತು ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿತು. ದಕ್ಷಿಣ ರಾಜ್ಯದ ಹಿತಾಸಕ್ತಿಗಳನ್ನು ರಕ್ಷಿಸಲು ಮತ್ತು ನೆರೆಯವರಿಗೆ ಒಂದು ಇಂಚು ಭೂಮಿಯನ್ನು ಬಿಟ್ಟುಕೊಡಬಾರದು ಎಂದು ನಿರ್ಧರಿಸಿತ್ತು.
ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಮಂಡಿಸಿದ ನಿರ್ಣಯವನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ನಿರ್ಣಯವು ಮಹಾರಾಷ್ಟ್ರವು ಸೃಷ್ಟಿಸಿದ ಗಡಿ ವಿವಾದವನ್ನು ಖಂಡಿಸಿದೆ.
Covid-19 BF.7 Symptoms : ಎಚ್ಚರ.. ಈ 5 ಲಕ್ಷಣಗಳು ಕಾಣಿಸಿಕೊಂಡ್ರೆ ಜಾಗ್ರತೆ