ನವದೆಹಲಿ : ಮಗಳ ಅಶ್ಲೀಲ ವಿಡಿಯೋವನ್ನು ಆನ್ ಲೈನ್ ನಲ್ಲಿ ಪೋಸ್ಟ್ ಮಾಡಿದ್ದನ್ನು ವಿರೋಧಿಸಿದ್ದಕ್ಕೆ ಯೋಧನನ್ನು ಕುಟುಂಬವೊಂದು ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ ಗುಜರಾತಿನ ನಾಡಿಯಾಡ್ನಲ್ಲಿ ನಡೆದಿದೆ.
ಶನಿವಾರ ಮಗಳ ಅಶ್ಲೀಲ ವಿಡಿಯೋವನ್ನು ಆನ್ಲೈನ್ನಲ್ಲಿ ಪೋಸ್ಟ್ ಮಾಡಿದ ಯುವಕನ ಮನೆಗೆ ವ್ಯಕ್ತಿ ಪತ್ನಿ, ಇಬ್ಬರು ಪುತ್ರರು ಮತ್ತು ಸೋದರಳಿಯನೊಂದಿಗೆ ಹೋಗಿದ್ದನು. ಆ ವೇಳೆ ಹುಡುಗನ ಕುಟುಂಬ ಸದಸ್ಯರು ನಿಂದಿಸಲು ಪ್ರಾರಂಭಿಸಿದರು. ಇದಕ್ಕೆ ಯೋಧ ಆಕ್ಷೇಪ ವ್ಯಕ್ತಪಡಿಸಿದಾಗ ಆತನ ಮೇಲೆ ದೊಣ್ಣೆ ಹಾಗೂ ಹರಿತವಾದ ವಸ್ತುಗಳಿಂದ ಹಲ್ಲೆ ನಡೆಸಿದ್ದರು. ಪರಿಣಾಮ ಯೋಧ ಸ್ಥಳದಲ್ಲೇ ಮೃತಪಟ್ಟಿದ್ದರುರ ಎನ್ನಲಾಗುತ್ತಿದೆ.
ಆನ್ ಲೈನ್ ನಲ್ಲಿ ವಿಡಿಯೋ ಪೋಸ್ಟ್ ಮಾಡಿದ ಯುವಕ ಹಾಗೂ ಯೋಧನ ಮಗಳು ಒಂದೇ ಶಾಲೆಯಲ್ಲಿ ಓದುತ್ತಿದ್ದು, ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
ಘಟನೆ ಸಂಬಂಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಕಲಂ 302, 307, 3223, 504, 143, 147 ಮತ್ತು 149 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.