ಬೆಂಗಳೂರು : ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BIGG NEWS : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಗುಡ್ ನ್ಯೂಸ್ : ನಾಳೆಯಿಂದ ವರ್ಗಾವಣೆ ಪ್ರಕ್ರಿಯೆ ಆರಂಭ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಇಂದು ಮತ್ತು ನಾಳೆಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಡಿ. 30ರವರೆಗೂ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಇನ್ನೂ 3 ದಿನ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.