ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಈಗಾಗಲೇ ಶಾಲಾ-ಕಾಲೇಜುಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಿ ಆದೇಶಿಸಿದ್ದು, ಈ ನಡುವೆ ಶಿಕ್ಷಣ ಇಲಾಖೆಯು ಶಾಲಾ,ಕಾಲೇಜುಗಳಲ್ಲಿ ಹಲವು ನಿಯಮಗಳನ್ನು ಜಾರಿಗೆ ತರಲು ಚಿಂತನೆ ನಡೆಸಿದೆ ಎನ್ನಲಾಗಿದೆ.
BIGG NEWS : ಧಾರವಾಡದಲ್ಲಿ ಜನವರಿ 12 ರಂದು `ಯುವಜನೋತ್ಸವ’ : ಪ್ರಧಾನಿ ಮೋದಿ ಭಾಗಿ
ಕೊರೊನಾ ಕಂಟ್ರೋಲ್ ಗೆ ಶಿಕ್ಷಣ ಇಲಾಖೆಯು ಮಹತ್ವದ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಮುಂದಾಗಿದ್ದು,1, 2 ಮತ್ತು 3 ನೇ ಅಲೆಯ ವೇಳೆ ತೆಗೆದುಕೊಂಡಿದ್ದ ಮುಂಜಾಗ್ರತಾ ಕ್ರಮಗಳನ್ನೇ ಮತ್ತೆ ಜಾರಿ ಮಾಡಲು ಎಲ್ಲಾ ಶಾಲಾ-ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ.
ಶಾಲಾ-ಕಾಲೇಜುಗಳ ಆವರಣದಲ್ಲಿ ಕಡ್ಡಾಯವಾಗಿ ವಿದ್ಯಾರ್ಥಿಗಳು, ಶಿಕ್ಷಕರು ಮಾಸ್ಕ್ ಧರಿಸಲು ಕ್ರಮವಹಿಸಬೇಕು. ಕಡ್ಡಾಯವಾಗಿ ಸ್ಯಾನಿಟೈಸರ್ ಬಳಕೆ ಕೂಡ ಮಾಡಬೇಕು. ಶಾಲಾ-ಕಾಲೇಜುಗಳ ಆವರಣಕ್ಕೆ ಸಾರ್ವಜನಿಕರು, ಪೋಷಕರಿಗೆ ನಿಷೇಧ ಹಾಕಬೇಕು. ಶಿಕ್ಷಕರು, ಉಪನ್ಯಾಸಕರು, ಸಿಬ್ಬಂದಿ ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಹಾಕಿಸಿರಬೇಕು. ಜೊತೆಗೆ ಬೂಸ್ಟರ್ ಡೋಸ್ ಹಾಕಿಸಿಕೊಳ್ಳಬೇಕು. ಅಡುಗೆ ಸಿಬ್ಬಂದಿ, ಸಹಾಯಕರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಹಾಕಿಸಿರಬೇಕು. ಜೊತೆಗೆ ಬೂಸ್ಟರ್ ಡೋಸ್ ಹಾಕಿಸಿಕೊಳ್ಳಬೇಕು.
BIGG NEWS : ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ತಡೆಗೆ ಮಹತ್ವದ ಕ್ರಮ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್
ವಿದ್ಯಾರ್ಥಿಗಳು ಪ್ರಾರ್ಥನೆ, ಊಟದ ಸಮಯ, ತರಗತಿ ಒಳಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕ್ರಮವಹಿಸಬೇಕು. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟರೆ ತರಗತಿಯ ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಿಸಬೇಕು ಎಂದು ಸೂಚನೆ ನೀಡಲಾಗಿದೆ ಎನ್ನಲಾಗಿದೆ.