ಬೆಳಗಾವಿ: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಹೀಗಾಗಿ ಕಾಂಗ್ರೆಸ್ ನಾಯಕರು ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಇದರಿಂದಾಗಿ ಇಂದು ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹೈವೋಲ್ಟೇಜ್ ಸಭೆ ನಡೆಯಲಿದೆ.
BIGG NEWS: ಕೋವಿಡ್ ರೂಲ್ಸ್ ಬ್ರೇಕ್; ಮಾಸ್ಕ್ ಧರಿಸದೆ ಕಡಲತೀರಗಳಲ್ಲಿ ಮೋಜು ಮಸ್ತಿ
ಎಐಸಿಸಿ ಕಾರ್ಯದರ್ಶಿ, ಬೆಳಗಾವಿ ವಿಭಾಗದ ಚುನಾವಣಾ ಉಸ್ತುವಾರಿ ವಿಷ್ಣುನಾದ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತದೆ ಎನ್ನಲಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಭಾರಿ ವಿನಯ್ ಕುಲಕರ್ಣಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಭಾರಿ ಎನ್.ಎಸ್.ಬೋಸರಾಜು ಭಾಗವಹಿಸಲಿದ್ದಾರೆ.
BIGG NEWS: ಕೋವಿಡ್ ರೂಲ್ಸ್ ಬ್ರೇಕ್; ಮಾಸ್ಕ್ ಧರಿಸದೆ ಕಡಲತೀರಗಳಲ್ಲಿ ಮೋಜು ಮಸ್ತಿ
ಬೆಳಗಾವಿಯ 18 ವಿಧಾನಸಭಾ ಕ್ಷೇತ್ರಕ್ಕೆ ಒಟ್ಟು 85 ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆಯಾದರೆ, ಬೆಳಗಾವಿ ಉತ್ತರ, ಕುಡಚಿ, ಅಥಣಿ ಕ್ಷೇತ್ರಕ್ಕೆ ಅತಿ ಹೆಚ್ಚು ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಸಿದ್ದಾರೆ. ಇದು ಕಾಂಗ್ರೆಸ್ ನಾಯಕರಿಗೆ ಕಗ್ಗಂಟಾಗಿದೆ ಎಂದು ಹೇಳಬಹುದು. ಮಧ್ಯಾಹ್ನ 12 ಗಂಟೆಯಿಂದ ಸಂಜೆ 6.30ರವರೆಗೆ ಈ ಸಭೆ ನಡೆಯಲಿದೆ. 18 ವಿಧಾನಸಭಾ ಕ್ಷೇತ್ರವಾರು ಪ್ರತ್ಯೇಕ ಸಭೆಯನ್ನು ಕಾಂಗ್ರೆಸ್ ನಾಯಕರು ನಡೆಸಲಿದ್ದಾರೆ.ಸಭೆಯಲ್ಲಿ ಟಿಕೆಟ್ಗಾಗಿ ಅರ್ಜಿ ಸಲ್ಲಿಸಿದ ಆಕಾಂಕ್ಷಿಗಳಿಂದ ಅಭಿಪ್ರಾಯ ಸಂಗ್ರಹ ಮಾಡಲಾಗುವುದು.