ಬೆಂಗಳೂರು : ಚೀನಾ ಸೇರಿದಂತೆ ಹಲವು ವಿದೇಶಗಳಲ್ಲಿ ಕೊರೊನಾ ಹೊಸ ತಳಿ ಬಿಎಫ್.7 ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿ ಹರಡುವ ಭೀತಿ ಶುರುವಾಗಿದೆ. ಹೀಗಾಗಿ ಕೊರೊನಾ ನಿಯಂತ್ರಣಕ್ಕಾಗಿ ಫುಲ್ ಅಲರ್ಟ್ ಆಗಿದೆ.
ಈಗಾಗಲೇ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಕೊರೊನಾ ನಿಯಮ ಜಾರಿಗೆ ತಂದಿದ್ದಾರೆ. ಪ್ರಾಥಮಿಕ ಹಂತದಲ್ಲಿ ಜನರಿಗೆ ಸಮಸ್ಯೆಯಾಗದಂತೆ ಕೆಲ ಸರಳ ರೂಲ್ಸ್ಗಳನ್ನ ಸರ್ಕಾರ ಹೊರಡಿಸಿದೆ. ಶಾಲೆ, ಕಾಲೇಜುಗಳಲ್ಲಿ, ಹೋಟೆಲ್ ರೆಸ್ಟೋರೆಂಟ್, ಥಿಯೇಟರ್, ಮಾಲ್, ಮಾರ್ಕೆಟ್ನಲ್ಲಿ ಮಾಸ್ಕ ಕಡ್ಡಾಯ ಮಾಡಲಾಗಿದೆ. ಆದ್ರೆ ರಾಜ್ಯದಲ್ಲಿ ಕೊರೋನಾ ನಿಯಮ ಉಲ್ಲಂಘಿಸಿದ್ದಾರೆ.
ಕೋವಿಡ್ ಮಾರ್ಗಸೂಚಿ ಜಾರಿಗೆ ಬೆನ್ನಲ್ಲೆ ಇಂದು ಬೆಳ್ಳಂಬೆಳಗ್ಗೆ ದಕ್ಷಿಣ ವಲಯದ ಬಿಬಿಎಂ ಆರೋಗ್ಯ ವೈದ್ಯಾಧಿಕಾರಿಗಳ ತಂಡದ ಫಿಲ್ಡಿಗಿಳಿದು ರೈಡ್ ಮಾಡಲಾಗುತ್ತಿದೆ.
ಗಾಂಧಿಬಜಾರ್ ಹೊಟೇಲ್ ತೆರಳಿ ತಪಾಸಣೆ ನಡೆಸಿದ್ದಾರೆ ಅಷ್ಟೇ ಅಲ್ಲದೇ ರೆಸ್ಟೋರೆಂಟ್ ಸಿಬ್ಬಂದಿಗೆ 2 ಡೋಸ್ ಕಡ್ಡಾಯವಾಗಿದ್ದು 2 ಡೋಸ್ ಪಡೆದಿದ್ದಾರಾ? ಇಲ್ವಾ ಅನ್ನೋದನ್ನು ಪರಿಶೀಲನೆ ನಡೆಸಲಾಗುತ್ತಿದೆ. ಪಡೆಯದೇ ಇದ್ದ ವ್ಯಕ್ತಿಗಳಿಗೆ 2 ಡೋಸ್ ಪಡೆಯಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಬಿಬಿಎಂಪಿ ದಕ್ಷಿಣ ವಲಯದ ಅಧಿಕಾರಿಗಳು ಸೂಚನೆ ನೀಡಿದ್ದಾರೆ.