ಬೆಳಗಾವಿ : ರಾಜ್ಯದಲ್ಲಿ ಕೊರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗಾಗಲೇ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
BIGG NEWS: ತುಮಕೂರಿನಲ್ಲಿ ತಮ್ಮ ಮನೆಗೆ ಕೆಲಸಕ್ಕೆಂದು ಬರುತ್ತಿದ್ದ ಬಾಲಕಿ ಮೇಲೆ ವಿದ್ಯಾರ್ಥಿಯಿಂದ ಅತ್ಯಾಚಾರ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಸೋಂಕಿತರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಬಿಎಫ್.7 ಗಂಭೀರವಾದ ಪರಿಣಾಮ ಬೀರುತ್ತೆ ಎಂಬ ಬಗ್ಗೆ ಮಾಹಿತಿ ಇಲ್ಲ. ಹಿರಿಯರು, ಇತರೆ ಆರೋಗ್ಯ ಸಮಸ್ಯೆ ಇರುವವರು ಎಚ್ಚರಿಕೆ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸೂಚನೆ ನೀಡಿದ್ದಾರೆ.