ಚಿತ್ರದುರ್ಗ : ತೆರಿಗೆ ವಂಚನೆ ದೂರು ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದ ಕಮರ್ಷಿಯಲ್ ಟ್ಯಾಕ್ಸ್ ಕಚೇರಿ ಮೇಲೆ ದಾಳಿ ಮಾಡಲಾಗಿದೆ. ಮತ್ತು ಚಿತ್ರದುರ್ಗ ತಾಲೂಕಿನ ಭೀಮಸಮುದ್ರ ಗ್ರಾಮದಲ್ಲಿ ಸಿದ್ದು ಪ್ಯಾಕಿಂಗ್ ಕಂಪನಿ ಮೇಲೆ ದಾಳಿ ಮಾಡಲಾಗಿದ್ದು. ಪರಿಶೀಲನೆ ನಡೆಸಲಾಗಿದೆ. ಭ್ರಷ್ಟಾಚಾರ, ತೆರಿಗೆ ವಂಚನೆ ದೂರು ಬಂದ ಹಿನ್ನೆಲೆಯಲ್ಲಿ ಎರಡು ಕಡೆ ಲೋಕಾಯುಕ್ತ ಎಸ್.ಪಿ. ವಾಸುದೇವ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.