ಬೆಳಗಾವಿ: ಚೀನಾದಲ್ಲಿ ಸೇರಿದಂತೆ ಹಲವು ವಿದೇಶಗಳಲ್ಲಿ ಕೊರೊನಾ ಹೊಸ ತಳಿ ಬಿಎಫ್.7 ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿ ಫುಲ್ ಅಲರ್ಟ್ ಆಗಿದೆ.
BIGG NEWS: ಕೋಟ್ಯಧಿಪತಿಗಳಿದ್ದರೂ ಶಾಸಕರಾಗೋಕೆ ಆಗಿಲ್ಲ, ನಾನು ಸಾಮಾನ್ಯ ಶಾಸಕನಾಗಿ ಆಯ್ಕೆ ಆಗಿದ್ದೇನೆ; ರೇಣುಕಾಚಾರ್ಯ
ಈಗಾಗಲೇ ರಾಜ್ಯ ಸರ್ಕಾರ ಇದಿನಿಂದ ಕೋವಿಡ್ ನಿಯಮ ಜಾರಿಗೆ ತಂದಿದ್ದಾರೆ.ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಈ ಕುರಿತು ಸುವರ್ಣಸೌಧದಲ್ಲಿ ಆರೋಗ್ಯ ಸಚಿವ ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಎಲ್ಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
BIGG NEWS: ಕೋಟ್ಯಧಿಪತಿಗಳಿದ್ದರೂ ಶಾಸಕರಾಗೋಕೆ ಆಗಿಲ್ಲ, ನಾನು ಸಾಮಾನ್ಯ ಶಾಸಕನಾಗಿ ಆಯ್ಕೆ ಆಗಿದ್ದೇನೆ; ರೇಣುಕಾಚಾರ್ಯ
ಸೋಂಕಿತರಿಗೆ ಯಾವುದೇ ತೊಂದರೆ ಆಗದ ರೀತಿ ನಾವು ಕ್ರಮ ಕೈಗೊಂಡಿದ್ದೇವೆ. ಎಲ್ಲಾ ಆಸ್ಪತ್ರೆಯಲ್ಲೂ ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಬಿಎಫ್ ೭ ಗಂಭೀರ ಪರಿಣಾಮ ಬೀರುವ ಬಗ್ಗೆ ಮಾಹಿತಿ ಇಲ್ಲ ಎಂದರು
ಹಿರಿಯರು , ಇತರೆ ಆರೋಗ್ಯ ಸಮಸ್ಯೆ ಇದ್ದವರು ಎಚ್ಚರವಹಿಸಬೇಕು. ಮಕ್ಕಳ ಮತ್ತು ಮಹಿಳೆಯರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲರೂ ಮಾಸ್ಕ್ ಧರಿಸಲು ಸೂಚನೆ ನೀಡಲಾಗಿದೆ ಎಂದರು.