ಕೆಎನ್ಎನ್ ಡಿಜಿಟಲ್ ಡೆಸ್ಕ್ : ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಇತ್ತೀಚಿನ ಕರ್ನಾಟಕ ಪ್ರವಾಸದ ವೇಳೆ ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ದೂರು ದಾಖಲಾಗಿದೆ.
ವೆಂಚರ್ ಕ್ಯಾಪಿಟಲಿಸ್ಟ್ ಮತ್ತು ರಾಜಕೀಯ ವಿಶ್ಲೇಷಕ ತಹಸೀನ್ ಪೊನವಾಲ ಅವರು ಸಾಮಾಜಿಕ ಜಾಲತಾಣಗಳ ಮೂಲಕ ಶಿವಮೊಗ್ಗ ಎಸ್ಪಿ ಜಿ.ಕೆ. ಮಿಥುನ್ ಕುಮಾರ್ ಅವರಿಗೆ ದೂರಿನ ಪ್ರತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಶಿವಮೊಗ್ಗ ನಗರದಲ್ಲಿ ಭಾನುವಾರ ಆಯೋಜಿಸಿದ್ದ ಹಿಂದೂ ಜಾಗರಣ ವೇದಿಕೆಯ ದಕ್ಷಿಣ ವಾರ್ಷಿಕ ಸಮಾವೇಶದಲ್ಲಿ ಮಧ್ಯಪ್ರದೇಶದ ಸಂಸದೆ ಪ್ರಜ್ಞಾ ಠಾಕೂರ್ ಭಾಗವಹಿಸಿದ್ದರು. ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ಅವರ ನಿವಾಸಕ್ಕೂ ಅವರು ಭೇಟಿ ನೀಡಿದ್ದರು.
ಸಮಾರಂಭದಲ್ಲಿ ಮಾತನಾಡುವಾಗ ಪ್ರಜ್ಞಾ ಠಾಕೂರ್, ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ಅತ್ಯಂತ ಅವಹೇಳನಕಾರಿ ಭಾಷಣ ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.
‘ಹಿಂದೂಗಳು ತಮ್ಮ ಹೆಣ್ಣು ಮಕ್ಕಳನ್ನು ನೋಡಿಕೊಳ್ಳಲು ಮನೆಯಲ್ಲಿ ಆಯುಧಗಳನ್ನು ಇಟ್ಟುಕೊಳ್ಳಿ, ಆಯುಧವಿಲ್ಲದಿದ್ದರೆ ತರಕಾರಿ ಕತ್ತರಿಸಲು ಬಳಸುವ ಚಾಕುವನ್ನು ಹರಿತಗೊಳಿಸಿ. ಶಿವಮೊಗ್ಗದ ಹರ್ಷ ಸೇರಿದಂತೆ ಹಿಂದೂ ಕಾರ್ಯಕರ್ತರ ಹತ್ಯೆಯನ್ನ ಉಲ್ಲೇಖಿಸಿದ ಅವರು, ಯಾವುದೇ ಘಟನೆಗಳನ್ನು ಎದುರಿಸಲು ನಮ್ಮ ಚಾಕುಗಳನ್ನು ಹರಿತಗೊಳಿಸಬೇಕು. ಅದು ನಮ್ಮ ಶತ್ರುಗಳ ಮೇಲೂ ಪರಿಣಾಮ ಬೀರುತ್ತದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಪ್ರಜ್ಞಾ ಸಿಂಗ್ ಅವರ ಭಾಷಣವು ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ಶಸ್ತ್ರಾಸ್ತ್ರಗಳ ಬಳಕೆಗೆ ಮುಕ್ತ ಕರೆಯಾಗಿದೆ.ಒಂದು ನಿರ್ದಿಷ್ಟ ಸಮುದಾಯದ ವಿರುದ್ಧ ಅಸಹಿಷ್ಣುತೆ, ದ್ವೇಷ, ಹಿಂಸಾಚಾರದ ಸಂಭಾವ್ಯ ಪರಿಣಾಮವನ್ನು ಹೊಂದಿದೆ ಎಂದು ದೂರಿನಲ್ಲಿ ಹೇಳಲಾಗಿದೆ.
ವಾಯುಭಾರ ಕುಸಿತ : ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಭಾರೀ ಮಳೆ ಸಾಧ್ಯತೆ |Rain Alert Bengaluru