ವಿಜಯಪುರ: ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ.
ಈ ವೇಳೆ ಇಬ್ಬರ ಗುಂಪು ಜಗಳ ವಿಕೋಪಕ್ಕೆ ಹೋಗಿ ಕಲ್ಲು ತೂರಾಟ ನಡೆಸಿದ್ದಾರೆ. ಈ ಅವಘಡದಿಂದ 6 ಜನರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಘಟನೆಯಲ್ಲಿ 5 ಬೈಕ್ಗಳು, 1 ಕ್ರೂಸರ್, 2 ಗೂಡ್ಸ್ ವಾಹನಗಳಿಗೆ ಹಾನಿಯಾಗಿದೆ. ವಾಹನಗಳ ಗ್ಲಾಸ್ ಗಳು ಪುಡಿಯಾಗಿವೆ. ಬೈಕ್ಗಳು ನೆಲಕ್ಕೆ ಬಿದ್ದು ಹಾನಿಗೀಡಾಗಿವೆ. ಘಟನಾ ಸ್ಥಳಕ್ಕೆ ತಾಳಿಕೋಟೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.