ಬೆಂಗಳೂರು : ಎಸ್ ಆರ್ ಎಸ್ ಟ್ರಾವೆಲ್ಸ್ ಗೆ ಸೇರಿದ 3 ಬಸ್ ಗಳು ಬೆಂಕಿಗಾಹುತಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೈಸೂರು ರಸ್ತೆಯಲ್ಲಿರುವ ಆರ್ ವಿ ಎಂಜಿನಿಯರಿಂಗ್ ಕಾಲೇಜು ಬಳಿ ನಿಂತಿದ್ದ ಎಸ್ ಆರ್ ಎಸ್ ಟ್ರಾವೆಲ್ಸ್ ಗೆ ಸೇರಿದ 3 ಬಸ್ ಗಳು ಬೆಂಕಿಗಾಹುತಿಯಾಗಿದೆ.
ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,. ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು ದೌಡಾಯಿಸಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.ಘಟನೆಗೆ ಕಾರಣ ತಿಳಿದು ಬಂದಿಲ್ಲ, ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
SHOCKING NEWS : 12 ಹೆಂಡತಿಯರು,102 ಮಕ್ಕಳನ್ನು ಹೊಂದಿದ ಉಗಾಂಡಾದ ಭೂಪ..!
BREAKING NEWS : ಚಾರ್ಮಾಡಿ ಘಾಟಿಯಲ್ಲಿ ನೂರಾರು ಎಕರೆ ಅರಣ್ಯ ಬೆಂಕಿಗಾಹುತಿ