ಬೆಂಗಳೂರು : ರೈಸ್ ಮಿಲ್ ಆವರಣದಲ್ಲಿ ವನ್ಯಜೀವಿಗಳನ್ನು ಅಕ್ರಮವಾಗಿ ಸಾಕಾಣಿಕೆ ಮಾಡಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ಎಸ್.ಎಸ್. ಮಲ್ಲಿಕಾರ್ಜುನ ಅವರನ್ನು ಈ ಕೂಡಲೇ ಬಂಧಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ಬಿಜೆಪಿ ಮುಖಂಡ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಯಶವಂತ ರಾವ್ ಜಾಧವ್ ಸುದ್ದಿಗಾರರ ಜೊತೆ ಮಾತನಾಡಿದ್ದು, ರೈಸ್ ಮಿಲ್ ಆವರಣದಲ್ಲಿ ವನ್ಯಜೀವಿಗಳನ್ನು ಅಕ್ರಮವಾಗಿ ಸಾಕಾಣಿಕೆ ಮಾಡಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ಎಸ್.ಎಸ್. ಮಲ್ಲಿಕಾರ್ಜುನ ಅವರನ್ನು ಈ ಕೂಡಲೇ ಬಂಧಿಸಿ, ಅಮಾಯಕರನ್ನು ಬಿಡುಗಡೆ ಮಾಡಿ ಎಂದು ಆಗ್ರಹಿಸಿದ್ದಾರೆ.
ವನ್ಯಜೀವಿಯನ್ನು ಕೊಂದು ತಿಂದ ಪ್ರಕರಣ ಅಲ್ಲದೇ ತಮ್ಮ ಪಾರಂ ಹೌಸ್ ನಲ್ಲಿ ವನ್ಯಜೀವಿಗಳನ್ನು ಅಕ್ರಮವಾಗಿ ಇರಿಸಿಕೊಂಡಿದ್ದ. ಮಲ್ಲಿಕಾರ್ಜುನ್ ಅವರನ್ನು ವನ್ಯಜೀವಿ ಕಾನೂನು ಪ್ರಕಾರ ಬಂಧಿಸುವಂತೆ ಆಗ್ರಹಿಸಿ ಸಿಎಂ ಬೊಮ್ಮಾಯಿಗೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ. ಈ ಕುರಿತಂತೆ ವಿಧಾನ ಮಂಡಲದ ಉಭಯ ಸದನಗಳಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಚರ್ಚೆ ಮಾಡಲು ನಮ್ಮ ನಾಯಕರು ಸಿದ್ದರಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಒಡೆತನದ ಕಲ್ಲೇಶ್ವರ ಮಿಲ್ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದರು. ಜಿಂಕೆ, ಕಾಡು ಹಂದಿ ಸೇರಿ ಇತರೆ ಪ್ರಾಣಿಗಳನ್ನು ಅಕ್ರಮವಾಗಿ ಇಡಲಾಗಿದೆ ಎಂದು ಶಂಕಿಸಿ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಮಲ್ಲಿಕಾರ್ಜುನ್ ಗೆ ಸೇರಿದ ಕಲ್ಲೇಶ್ವರ ಮಿಲ್ ಗೆ ಒಟ್ಟು 20 ಕ್ಕೂ ಹೆಚ್ಚು ಅಧಿಕ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಧಿಡೀರ್ ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಜೀವಂತ ಪ್ರಾಣಿಗಳು ಪತ್ತೆಯಾಗಿದ್ದವು.
ಸಿಎಂ ಬೊಮ್ಮಾಯಿಯನ್ನು ಹೈಕಮಾಂಡ್ ಕೀ ಕೊಟ್ಟು ಕುಣಿಸುತ್ತಿದೆ: ಟ್ವೀಟ್ ನಲ್ಲಿ ಕಾಂಗ್ರೆಸ್ ವ್ಯಂಗ್ಯ