ಬೆಳಗಾವಿ : ರಾಜ್ಯದ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ 35 ಸಾವಿರಕ್ಕೂ ಹೆಚ್ಚಿನ ದೇವಾಲಯಗಳ ಸಮಗ್ರ ಆಸ್ತಿಯ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರದಿಂದ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಬೆಳಗಾವಿಯಲ್ಲಿ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಎ,ಬಿ ಮತ್ತು ಸಿ ದರ್ಜೆಯ 35 ಸಾವಿರಕ್ಕೂ ಹೆಚ್ಚು ದೇವಾಲಯಗಳಿದೆ. ಇವುಗಳು ಗೆಜೆಟ್ ನ ಪಟ್ಟಿಯಲ್ಲಿ ನಮೂದಾಗಿದೆ ಎಂದು ಹೇಳಿದರು.
ರಾಜ್ಯದ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ 35 ಸಾವಿರಕ್ಕೂ ಹೆಚ್ಚಿನ ದೇವಾಲಯಗಳ ಸಮಗ್ರ ಆಸ್ತಿಯ ಮಾಹಿತಿ ಕಲೆ ಹಾಕುವುದು ಹಾಗೂ ಸಮೀಕ್ಷೆ ನಡೆಸುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು. ಈ ಹಿನ್ನೆಲೆ ಅಗತ್ಯವಾದ ವಿಶೇಷ ಅನುದಾನ ನೀಡುವಂತೆ ಸಿಎಂ ಬೊಮ್ಮಾಯಿಗೆ ಮನವಿ ಸಲ್ಲಿಸಲಾಗಿದೆ ಎಂದರು.
ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ತಡೆದು ಖನಿಜ ಸಂಪತ್ತನ್ನು ರಕ್ಷಿಸಲು ಪ್ರಪ್ರಥಮ ಬಾರಿಗೆ ಖನಿಜ ರಕ್ಷಣಾ ಪಡೆ ಸ್ಥಾಪನೆ
ರಾಜ್ಯದ ಖನಿಜ ಮತ್ತು ಉಪಖನಿಜ ಅನಧಿಕೃತ ಗಣಿಗಾರಿಕೆ ಮತ್ತು ಸಾಗಾಣಿಕೆಯನ್ನು ತಡೆಗಟ್ಟಲು ಹಾಗೂ ರಾಜ್ಯದ ಖನಿಜ ಸಂಪತ್ತನ್ನ ಸಂರಕ್ಷಿಸಿ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ದಿಟ್ಟ ಹೆಜ್ಜೆಗಳನ್ನು ಇಟ್ಟಿದೆ. ಪ್ರಪ್ರಥಮ ಬಾರಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧೀನದಲ್ಲಿ ಪ್ರತಿ ಜಿಲ್ಲೆಯಲ್ಲಿ ಖನಿಜ ರಕ್ಷಣಾ ಪಡೆಯನ್ನು ಸ್ಥಾಪಿಸಲಾಗಿದ್ದು, *ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಗಸ್ತು ವಾಹನಗಳಿಗೆ ಚಾಲನೆ ನೀಡಲಾಗಿದೆ ಎಂದು ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ್* ತಿಳಿಸಿದರು.
ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಪ್ರಪ್ರಥಮ ಬಾರಿಗೆ “ಖನಿಜ ರಕ್ಷಣಾ ಪಡೆ” ಯ ಗಸ್ತುವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳಂತೆ ಪೆÇೀಲೀಸ್ ಇಲಾಖೆ, ಕಂದಾಯ ಇಲಾಖೆ, ಅರಣ್ಯ ಇಲಾಖೆ, ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಖನಿಜ ಮತ್ತು ಉಪಖನಿಜಗಳ ಅನಧಿಕೃತ ಗಣಿಗಾರಿಕೆ, ದಾಸ್ತಾನು ಮತ್ತು ಸಾಗಾಣಿಕೆ ವಿರುದ್ದ ಕ್ರಮಕೈಗೊಳ್ಳಲು ಅಧಿಕಾರ ಪ್ರತ್ಯೋಜಿಸಲಾಗಿರುತ್ತದೆ. ಆದಾಗ್ಯೂ ಸದರಿ ಇಲಾಖೆಗಳಿಂದ ಅಕ್ರಮ ಖನಿಜ ಮತ್ತು ಉಪಖನಿಜಗಳ ಗಣಿಗಾರಿಕೆ ಮತ್ತು ಸಾಗಾಣಿಕೆಯನ್ನು ತಡೆಗಟ್ಟುವ ಕ್ರಮಗಳು ಹೆಚ್ಚಿನ ಪರಿಣಾಮಕಾರಿಯಾಗಿರುವುದಿಲ್ಲ. ಈ ಹಿನ್ನಲೆಯಲ್ಲಿ ಅಕ್ರಮ ಖನಿಜ ಮತ್ತು ಉಪಖನಿಜಗಳ ಗಣಿಗಾರಿಕೆ ಮತ್ತು ಸಾಗಾಣಿಕೆ ತಡೆಗಟ್ಟಲು, ಸಂಬಂಧಿಸಿದ ಇಲಾಖೆಗಳಲ್ಲಿನ ಕೆಲಸದ ಒತ್ತಡಗಳಿಂದ ಹೆಚ್ಚಿನ ಯಶಸ್ಸು ಸಾಧ್ಯವಾಗಿರುವುದಿಲ್ಲ. ಆದ್ದರಿಂದ, ದಿನಾಂಕ: 30-04-2020 ರಂದು ಜರುಗಿದ ಸಚಿವ ಸಂಪುಟ ಸಭೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧೀನದಲ್ಲಿ ಪ್ರತಿ ಜಿಲ್ಲೆಯಲ್ಲಿ ಒಂದು ಖನಿಜ ರಕ್ಷಣಾ ಪಡೆಯನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಪ್ರಥಮ ಬಾರಿಗೆ ಇಂದು ಬೆಳಗಾವಿಯಲ್ಲಿ ಗಸ್ತುವಾಹನಗಳಿಗೆ ಚಾಲನೆ ನೀಡುವ ಮೂಲಕ ಖನಿಜ ರಕ್ಷಣಾ ಪಡೆಗೆ ಚಾಲನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.
SHOCKING : ಶಾಲೆಯಲ್ಲಿ ಇಲಿ ಬಿದ್ದಿದ್ದ ಸಾಂಬಾರನ್ನೇ ಮಕ್ಕಳಿಗೆ ಬಡಿಸಿದ ಅಡುಗೆ ಸಹಾಯಕರು..!