ಬೆಂಗಳೂರು : ಬೆಂಗಳೂರಿನಲ್ಲಿ ಶಿವಮೊಗ್ಗ ಮೂಲದ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತ ಬಾಲಕಿಯನ್ನು ರಕ್ಷಿತಾ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಅಣ್ಣನ ಮನೆಯಲ್ಲಿದ್ದ ಶಿವಮೊಗ್ಗದ ಬಾಲಕಿ ರಕ್ಷಿತಾ (17) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಕ್ಷಿತಾಗೆ ಇತ್ತೀಚೆಗೆ ನಿಶ್ಚಿತಾರ್ಥವಾಗಿತ್ತು, 18 ವರ್ಷ ತುಂಬಿದ ಬಳಿಕ ಮದುವೆ ಮಾಡಲು ಪೋಷಕರು ನಿರ್ಧರಿಸಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ, ಬಸವೇಶ್ವರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಲಿಫ್ಟ್ ಕುಸಿದು ಕಾರ್ಮಿಕ ಬಲಿ
ಬೆಂಗಳೂರು : ಲಿಫ್ಟ್ ಕುಸಿದು ಉತ್ತರ ಪ್ರದೇಶ ಮೂಲದ ಕಾರ್ಮಿಕ ಮೃತಪಟ್ಟಿರುವ ಘಟನೆ ತಿಗರಪಾಳ್ಯದ ಆಫ್ನಾ ಮೆಡಿಕಲ್ ಫ್ರೈವೇಟ್ ಲಿಮಿಟೆಡ್ ಬಿಲ್ಡಿಂಗ್ ನಲ್ಲಿ ನಡೆದಿದೆ.
ಮೆಡಿಕಲ್ ವೇರ್ ಹೌಸ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಕಾರ್ಮಿಕರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ರಾಜಗೋಪಾಲನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೆಡಿಕಲ್ ವೇರ್ ಹೌಸ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಇವರಾಗಿದ್ದು, ಓಪನ್ ಲಿಫ್ಟ್ ನಲ್ಲಿ ಔಷಧಿ ಸಾಗಿಸುವ ವೇಳೆ ದುರ್ಘಟನೆ ಸಂಭವಿಸಿದೆ. ರಾಜಗೋಪಾಲನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.