ಬೆಂಗಳೂರು: 969 ಕೊಳವೆ ಬಾವಿ ಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಇಡಿ ನೋಟಿಸ್ ಜಾರಿ ಮಾಡಿದೆ.
BIGG NEWS: ರಾಜ್ಯದ ಹಳ್ಳಿಗಳಲ್ಲಿರುವ ದೇವಸ್ಥಾನಗಳ ಮೇಲೆ ಕಳ್ಳರ ಕಣ್ಣು; 334 ದೇವಾಲಯ ಕಳವು ಪ್ರಕರಣ ದಾಖಲು
ಕೊಳವೆ ಬಾವಿ, ಆರ್ ಒ ಘಟಕಗಳ ಸ್ಥಾಪನೆ ಹೆಸರಿನಲ್ಲಿ ಅಕ್ರಮವಾಗಿ ಎಂದು ಆರೋಪಿಸಲಾಗಿದೆ. ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿಯಲ್ಲಿ ಬಿಬಿಎಂಪಿ ಆಯುಕ್ತರಿಗೆ ಇಡಿ ನೋಟಿಸ್ ನೀಡಿದೆ. ಬೆಂಗಳೂರಿನ 198 ವಾರ್ಡ್ ಗಳಲ್ಲಿ ಕೊಳವೆ ಬಾವಿ ಕೊರೆಸುವುದು ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಗಾಗಿ 969 ಕೋಟಿ ವೆಚ್ಚ ವಿಚಾರವಾಗಿ ಅಕ್ರಮ ನಡೆದಿದೆ.ಇದರಲ್ಲಿ ಅಕ್ರಮ ನಡೆದಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲೆ ಬಿಜೆಪಿ ಘಟಕ ಅಧ್ಯಕ್ಷ ಎನ್ . ಆರ್ ರಮೇಶ್ ದೂರು ನೀಡಿದ್ದರು. ಈ ದೂರಿನ ಮೇರೆಗೆ ಇಡಿ ಅಧಿಕಾರಿಗಳಿಂದ ನೋಟಿಸ್ ಬಂದಿದೆ. ಇದೀಗ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ.