ಮೈಸೂರು: ಸದ್ಯ ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿ ತರುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಕಳೆದ ಹಿಂದೆ ಅಷ್ಟೆ ಮುರುಡೇಶ್ವರದಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸುವಂತೆ ಹಿಂದೂ ಪರ ಸಂಘಟನೆಗಳು ಒತ್ತಾಯಿಸಿದೆ.
ಇದೀಗ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕಕೆ ಬರುವ ಭಕ್ತಾದಿಗಳಿಗೆ ಡ್ರೆಸ್ ಕೋಡ್ ಕಡ್ಡಾಯಗೊಳಿಸಬೇಕೆಂದು ಕೂಗು ಕೇಳಿಬರುತ್ತಿದೆ. ಇದಕ್ಕೆ ಹಲವು ಮಹಿಳಾ ಸಂಘಟನೆಗಳು ಹಾಗೂ ಕನ್ನಡ ಪರ ಸಂಘಟನೆಗಳೂ ಕೂಡ ಧ್ವನಿಗೂಡಿಸಿವೆ.ರಾಜ್ಯದ ಹಾಗೂ ಹೊರ ರಾಜ್ಯದ ಪ್ರಮುಖ ದೇವಸ್ಥಾನಗಳ ಪ್ರವೇಶಕ್ಕೆ ವಸ್ತ್ರಸಂಹಿತೆ ಇದೆ. ಇದೇ ರೀತಿ ನಾಡದೇವತೆ ಚಾಮುಂಡಿ ದರ್ಶನಕ್ಕೂ ವಸ್ತ್ರಸಂಹಿತೆ ಜಾರಿ ಮಾಡುವಂತೆ ಆಗ್ರಹಿಸಲಾಗಿದೆ.
ಚಾಮುಂಡಿ ದೇವಸ್ಥಾನದಲ್ಲಿ ಈವರೆಗೂ ಯಾವುದೇ ಡ್ರೆಸ್ಕೋಡ್ ಇರಲಿಲ್ಲ. ಹೀಗಾಗಿ ದೇವಾಲಯಕ್ಕೆ ಬರುವ ಭಕ್ತರು ತಮಗಿಷ್ಟ ಬಂದ ಉಡುಪು ಧರಿಸಿ ದೇವಸ್ಥಾನಕ್ಕೆ ಬರುತ್ತಿದ್ರು. ಇದೀಗ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ವಸ್ತ್ರಸಂಹಿತೆ ಕಡ್ಡಾಯಗೊಳಿಸುವಂತೆ ಮೈಸೂರಿನ ಹಲವು ಮಹಿಳಾ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಮನವಿ ಮಾಡ್ತಿದ್ದಾರೆ