ಜಮ್ಮು: ಇಲ್ಲಿನ ಪಂಜ್ತಿರ್ತಿ-ಸಿದ್ರಾ ರಸ್ತೆಯಲ್ಲಿ ಬೆಳಿಗ್ಗೆ 7.30ಕ್ಕೆ ಭದ್ರತಾ ಪಡೆಗಳು ಮತ್ತು ಇಬ್ಬರು-ಮೂವರು ಭಯೋತ್ಪಾದಕರ ನಡುವೆ ಎನ್ಕೌಂಟರ್ ನಡೆದಿದ್ದು, ನಂತರ ಸ್ಥಳಕ್ಕೆ ಹೆಚ್ಚುವರಿ ಭದ್ರತಾ ಪಡೆಯನ್ನು ರವಾನಿಸಲಾಯಿತು. ಗ್ರೆನೇಡ್ ಸ್ಫೋಟ ಸಂಭವಿಸಿದ ನಂತರ ಗುಂಡಿನ ಚಕಮಕಿ ನಡೆಯಿತು.
ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ವಶಪಡಿಸಿಕೊಳ್ಳಲಾದ 15 ಕೆಜಿ ತೂಕದ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಪೊಲೀಸರು ಸೋಮವಾರ ನಿಷ್ಕ್ರಿಯಗೊಳಿಸಿದ ನಂತರ ಈ ಎನ್ಕೌಂಟರ್ ನಡೆದಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ನ ಒಂದು ಕೋಡೆಡ್ ಶೀಟ್ ಮತ್ತು ಒಂದು ಲೆಟರ್ ಪ್ಯಾಡ್ ಪುಟವನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಧಿಕಾರಿಗಳ ಪ್ರಕಾರ, ಬಸಂತ್ಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
J&K | Encounter underway in Sidhra area of Jammu, firing going on, two terrorists likely on the spot: Jammu and Kashmir police pic.twitter.com/R4JCATGM65
— ANI (@ANI) December 28, 2022