ಹೈದರಾಬಾದ್: ಕಿರುತೆರೆ ನಟಿ ತುನಿಶಾ ಶರ್ಮಾ ಅವರ ಆತ್ಮಹತ್ಯೆಯ ನಂತರ ಮತ್ತೊಂದು ಹೃದಯ ವಿದ್ರಾವಕ ಸುದ್ದಿ ಹೊರಬಿದ್ದಿದೆ. ಛತ್ತೀಸಗಡದ ರಾಯ್ಗಢದ ನಿವಾಸಿ ಲೀನಾ ನಾಗ್ವಂಶಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ತಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಲೀನಾ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಪೊಲೀಸರು ಶವವನ್ನು ವಶಕ್ಕೆ ತೆಗೆದುಕೊಂಡು ತನಿಖೆಯನ್ನು ಪ್ರಾರಂಭಿಸಿದ್ದಾರೆ. ಡಿಸೆಂಬರ್ 24 ರಂದು, ಟಿವಿ ನಟಿ ತುನಿಶಾ ಕೂಡ ಶೂಟಿಂಗ್ ಸೆಟ್ನ ಮೇಕಪ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಚಕ್ರಧರ್ ಪ್ರದೇಶದ ಪೊಲೀಸರು ಸ್ಥಳಕ್ಕೆ ತಲುಪಿ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಇಡೀ ವಿಷಯದಲ್ಲಿ ಪೊಲೀಸರು ಇನ್ನೂ ಯಾವುದೇ ಹೇಳಿಕೆಯನ್ನು ನೀಡಿಲ್ಲ. ಸದ್ಯ ಲೀನಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈಗ ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಲೀನಾ ಸಾವಿನ ಕಾರಣವನ್ನು ಬಹಿರಂಗಪಡಿಸಲಾಗುವುದು.