ಬೆಂಗಳೂರು : ಬೆಂಗಳೂರಿನ ಜನತೆಗೆ ಬಿಗ್ ಶಾಕ್ ಎದುರಾಗಿದ್ದು, ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದೆ.
BREAKING NEWS: ಅಮೆರಿಕದಲ್ಲಿ ಹೆಪ್ಪುಗಟ್ಟಿದ ಸರೋವರಕ್ಕೆ ಬಿದ್ದು ಮೂವರು ಭಾರತೀಯರು ಸಾವು- ಯುಎಸ್ ಅಧಿಕೃತ ಮಾಹಿತಿ
ಬೆಂಗಳೂರಿನಲ್ಲಿ ಡಿಸೆಂಬರ್ ತಿಂಗಳನಲ್ಲೇ ಅತಿ ಹೆಚ್ಚು ಕೊರೊನಾ ಪ್ರಕರಣಗಳ ಸಂಖ್ಯೆ ವರದಿಯಾಗಿದ್ದು, ವಿದೇಶದಿಂದ ಬಂದ ಪ್ರಯಾಣಿಕರು ಸೇರಿದಂತೆ ಸದ್ಯ ಬೆಂಗಳೂರಿನಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ 1,209 ಇದೆ. ರಾಜ್ಯದಲ್ಲಿ ಒಟ್ಟು 1248 ಸಕ್ರಿಯ ಪ್ರಕರಣಗಳ ಪೈಕಿ ಬೆಂಗಳೂರಿನಲ್ಲೇ 1,209 ಕೇಸ್ ಗಳಿರುವುದು ಅತಂಕಕ್ಕೆ ಕಾರಣವಾಗಿದೆ.
ವಿವಿಧ ದೇಶಗಳಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ 16 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾ ರೂಪಾಂತರಿ ಪತ್ತೆಹಚ್ಚಲು ಎಲ್ಲಾ ಸೋಂಕಿತರ ಮಾದರಿಗಳನ್ನು ಜೀನೋಮಿಕ್ ಪರೀಕ್ಷೆಗೆ ಕಳುಹಿಸಲಾಗಿದೆ. ಒಟ್ಟಾರೆ ಹೊಸ ವರ್ಷಾಚರಣೆ ಸಮೀಪಿಸುತ್ತಿದ್ದಂತೆ ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಪಾಸಿಟಿವ್ ಕೇಸ್ ಗಳು ಹೆಚ್ಚುತ್ತಿದ್ದು, BF.7 ವೈರಸ್ ಆತಂಕಕ್ಕೂ ಇಮ್ಮಡಿಗೊಂಡಿದೆ.