ಕೆಎನ್ಎನ್ ಡಿಜಿಟಲ್ ಡೆಸ್ಕ್ : ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ದೆಹಲಿಯಲ್ಲಿ 138 ನೇ ಸಂಸ್ಥಾಪನಾ ದಿನವನ್ನು ಆಚರಿಸುತ್ತಿದೆ. ಭಾರತ್ ಜೋಡೊ ಯಾತ್ರೆಯ ಭಾಗವಾಗಿ ರಾಷ್ಟ್ರ ರಾಜಧಾನಿಯಲ್ಲಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿಯವರು ತಮ್ಮ ತಾಯಿಯೊಂದಿಗೆ ಸಂತಸದ ಕ್ಷಣದ ವಿಡಿಯೋ ವೈರಲ್ ಆಗಿದೆ.
ಎಎನ್ ಐ ಹಂಚಿಕೊಂಡ ವಿಡಿಯೋದಲ್ಲಿ ಪರಸ್ಪರ ಪಕ್ಕದಲ್ಲಿ ಕುಳಿತಿರುವ ತಾಯಿ-ಮಗ ಕೆಲವು ಕೌಟುಂಬಿಕ ವಿಚಾರವನ್ನು ಮಾತಾಡುತ್ತಾ ನಗುತ್ತಿರುವ ವಿಡಿಯೋವನ್ನು ನೋಡಬಹುದು.
#WATCH | Congress MP Rahul Gandhi had a joyful moment with his mother Sonia Gandhi during the party's 138th Foundation Day celebration event in Delhi pic.twitter.com/tgqBAxY2co
— ANI (@ANI) December 28, 2022
ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಡಿಸೆಂಬರ್ 24 ರಂದು ದೆಹಲಿ ಪ್ರವೇಶಿಸಿದ ಭಾರತ್ ಜೋಡೊ ಯಾತ್ರೆಯಲ್ಲಿ ಭದ್ರತಾ ಉಲ್ಲಂಘನೆ ಎಂದು ಆರೋಪಿಸಿ ಕಾಂಗ್ರೆಸ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ತಮ್ಮ ಪತ್ರದಲ್ಲಿ ದೆಹಲಿ ಪೊಲೀಸರು ಮೂಕ ಪ್ರೇಕ್ಷಕರಂತೆ ವರ್ತಿಸಿದರು. ಹೆಚ್ಚುತ್ತಿರುವ ಜನರನ್ನು ನಿಯಂತ್ರಿಸಲು ಮತ್ತು ಝಡ್ ಭದ್ರತೆಯನ್ನು ನಿಯೋಜಿಸಲಾಗಿರುವ ರಾಹುಲ್ ಗಾಂಧಿಯ ಸುತ್ತ ಪರಿಧಿಯನ್ನು ನಿರ್ವಹಿಸಲು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.
ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಆರಂಭವಾದ ಕಾಂಗ್ರೆಸ್ನ ಭಾರತ್ ಜೋಡೊ ಯಾತ್ರೆ ಮುಂದಿನ ವರ್ಷ ಕಾಶ್ಮೀರದಲ್ಲಿ ಅಂತ್ಯಗೊಳ್ಳಲಿದೆ. ಇದು ಭಾರತದ ಇತಿಹಾಸದಲ್ಲಿ ಯಾವುದೇ ಭಾರತೀಯ ರಾಜಕಾರಣಿ ನಡೆಸಿದ ಕಾಲ್ನಡಿಗೆಯ ಮೆರವಣಿಗೆಯಾಗಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.
ಇಲ್ಲಿಯವರೆಗೆ, ಭಾರತ್ ಜೋಡೊ ಯಾತ್ರೆ ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ ಮತ್ತು ಹರಿಯಾಣದ ಭಾಗಗಳಲ್ಲಿ ನಡೆದಿದೆ. ಇದು ಮುಂದಿನ ವರ್ಷ ಕೊನೆಗೊಳ್ಳಲಿದೆ.
Viral Video : ಮೀನು ತಿನ್ನುವ ಆಸೆಯಿಂದ ಮಾರ್ಗ ಮಧ್ಯೆ ‘ರೈಲು’ ನಿಲ್ಲಿಸಿದ ಚಾಲಕ, ವಿಡಿಯೋ ವೈರಲ್
BREAKING NEWS : ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ : 7 ಮೊಬೈಲ್, 1,60 ಲಕ್ಷ ರೂ ಹಣ ಪತ್ತೆ