ಬೆಂಗಳುರು : ಮಹಾರಾಷ್ಟ್ರ ಗಡಿ ವಿವಾದದ ಹಿನ್ನೆಲೆ ಮಹಾ ಸರ್ಕಾರದ ವಿರುದ್ಧ ಕನ್ನಡಪರ ಹೋರಾಟಗಾರರು ಪತಿಭಟನೆ ನಡೆಸಿದ್ದರು. ಇದೀಗ ಬೆಂಗಳೂರಿನಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.
ಬೆಳಗಾವಿ ಗಡಿ ಕ್ಯಾತೆ ಕುರಿತು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹಾಗೂ ಅವರ ಬೆಂಬಲಿಗರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.
ಮಹಾರಾಷ್ಟ್ರ ಗಡಿ ವಿವಾದದ ಹಿನ್ನೆಲೆ ಮಹಾ ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ನವೆಂಬರ್ 26ರಂದು ಪ್ರತಿಭಟನೆ ನಡೆಸಿದ್ದರು. ಮಹಾರಾಷ್ಟ್ರ ಗಡಿ ವಿವಾದದ ಕ್ಯಾತೆ ತೆಗೆದಿರುವ ಮಹಾ ಸರ್ಕಾರದ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ಮಹಾ ಪುಂಡರು ಕರ್ನಾಟಕದ ಬಸ್ ಗಳಿಗೆ ಮಸಿ ಬಳಿಸಿದ್ದರು, ಇದನ್ನು ಖಂಡಿಸಿ ಕನ್ನಡ ಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿ ರಾಜ್ಯದ ಹಲವು ಕಡೆ ಪ್ರತಿಭಟನೆ ನಡೆಸಿದ್ದರು. ಮಹಾರಾಷ್ಟ್ರದ ವಾಹನಗಳಿಗೆ ಮಸಿ ಬಳಿದಿದ್ದರು.
Pro #Kannada activist Vattal Nagaraj and his supporters protested in #Bengaluru against #Maharashtra Govt over #Belagavi border issue , protestors also burnt efiggy of Chief Minister #EknathShinde .. Police detained protestors..@CMofKarnataka @CMOMaharashtra pic.twitter.com/HcyDyUs9bb
— Yasir Mushtaq (@path2shah) December 28, 2022