ಬೆಳಗಾವಿ : ಬೆಳಗಾವಿಯ ಸುವರ್ಣಸೌಧದಲ್ಲಿ ನಾಳೆ( ಡಿ.29) ಸಂಜೆ 5 ಗಂಟೆಗೆ ಸಚಿವ ಸಂಪುಟ ಸಭೆ ನಿಗದಿಯಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಸಭೆಯಲ್ಲಿ ಹಲವು ಮಹತ್ವದ ವಿಚಾರಗಳು ಚರ್ಚೆಯಾಗಲಿದೆ.
ಇನ್ನೂ, ಬೆಳಗಾವಿ ಚಳಿಗಾಲದ ಅಧಿವೇಶನ ನಾಳೆಯೇ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ. ನಿಗದಿತ ಅವಧಿಗಿಂತ ಒಂದು ದಿನ ಮೊದಲೇ ಅಧಿವೇಶನ ಅಂತ್ಯಗೊಳ್ಳುವ ಸಾಧ್ಯತೆ ಇದೆ.
ಡಿ.17 ರಿಂದ ಆರಂಭವಾಗಿರುವ ಅಧಿವೇಶನ ಡಿ.30 ರವರೆಗೆ ನಿಗದಿಯಾಗಿತ್ತು, ಆದರೆ ಒಂದು ದಿನ ಮೊದಲೇ ಅಂದರೆ ನಾಳೆ ಅಧಿವೇಶನ ಅಂತ್ಯಗೊಳ್ಳುವ ಸಾಧ್ಯತೆ ಇದೆ. ಕೋವಿಡ್ ಸೋಂಕು ಉಲ್ಪಣ ಹಾಗೂ ಮಾರ್ಗಸೂಚಿ ಪಾಲನೆ ಹಿನ್ನೆಲೆ ಒಂದು ದಿನ ಮೊದಲೇ ಚಳಿಗಾಲದ ಅಧಿವೇಶನ ಸಮಾಫ್ತಿಗೊಳ್ಳಲಿದೆ ಎನ್ನಲಾಗಿದೆ. ಸದನ ಸಲಹಾ ಸಮಿತಿಯಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ.
BIGG NEWS : ಪ್ರಧಾನಿ ಮೋದಿ ತಾಯಿ ಆದಷ್ಟು ಬೇಗ ಚೇತರಿಸಿಕೊಳ್ಳಲಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾರೈಕೆ
BREAKING NEWS : ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ : ವಕೀಲ ಮಹದೇವಯ್ಯಗೆ ಜಾಮೀನು ಮಂಜೂರು