ಬೆಳಗಾವಿ : ಮುಂದಿನ ವರ್ಷ ಜನವರಿ 27ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಹಂಪಿ ಉತ್ಸವವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( C.M Basavaraj Bommai) ಉದ್ಘಾಟಿಸಲಿದ್ದಾರೆ.
2023ರ ಜನವರಿ ತಿಂಗಳಾಂತ್ಯಕ್ಕೆ ಮೂರು ದಿನಗಳ ಕಾಲ ಹಂಪಿ ಉತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲು ಸಕಲ ಸಿದ್ದತೆ ಕೈಗೊಳ್ಳಲಾಗಿದೆ ಎಂದು ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಹೇಳಿದರು. ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ಸಭೆ ನಡೆಸಿದ ಸಚಿವರು ನಂತರ ಮಾತನಾಡಿದರು.
ಜನವರಿ 27ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಹಂಪಿ ಉತ್ಸವವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ, ಮೈಸೂರು ದಸರಾ ಮಾದರಿಯಲ್ಲೇ ಹಂಪಿ, ಕಮಲಾಪುರ, ಹೊಸಪೇಟೆಯಲ್ಲಿ ದೀಪಾಲಂಕಾರ ಮಾಡುವ ಬಗ್ಗೆ ನಿರ್ಧರಿಸಲಾಗಿದೆ ಸಾಂಸ್ಕೃತಿಕ ಸಂಜೆ, ಹಂಪಿ ಬೈ ಸ್ಕೈ, ಹೆಲಿಕಾಪ್ಟರ್ ರೈಡ್, ತುಂಗಾ ಆರತಿ, ಗ್ರಾಮೀಣ ಕ್ರೀಡೆಗಳ ಜೊತೆಗೆ ತುಂಗಭದ್ರಾ ನದಿಯಲ್ಲಿ ಜಲಕ್ರೀಡೆ ನಡೆಸಲು ನಿರ್ಧರಿಸಲಾಗಿದೆ .
ಹಂಪಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಐತಿಹಾಸಿಕ ಸ್ಥಳ. ಇದು ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪಿಯ ಮೊದಲನೆ ಹೆಸರು ‘ಪಂಪಾ’ ಎಂದಿತ್ತು. ಅಂದರೆ ತುಂಗಭದ್ರ ನದಿ ಎಂದರ್ಥ. ವರ್ಷಗಳು ಕಳೆದಂತೆ ಇದು ‘ವಿಜಯನಗರ’ ಮತ್ತು ‘ವಿರುಪಾಕ್ಷಪುರ’ ಎಂದು ಕರೆಯಲ್ಪಟ್ಟಿತು. ಹಂಪೆಯನ್ನು ಯುನೆಸ್ಕೋ ವಿಶ್ವ ಪರಂಪರೆಯ ತಾಣ ಎಂದು ಘೋಷಿಸಿದೆ. ಕೃಷ್ಣದೇವರಾಯನ ರಾಜ್ಯಭಾರ ಮುಗಿದ ನಂತರ ವಿಜಯನಗರ ಸಾಮ್ರಾಜ್ಯ ತನ್ನ ಪ್ರಾಬಲ್ಯವನ್ನು ನಿಧಾನವಾಗಿ ಕಳೆದುಕೊಳ್ಳುತ್ತಾ ಬಂತು. ಕೊನೆಗೆ ತಾಳೀಕೋಟೆಯ ಯುದ್ಧದಲ್ಲಿ ಮುಸ್ಲಿಂ ಸಾಮ್ರಾಜ್ಯದಿಂದ ಬಂದ ಆಕ್ರಮಣವನ್ನು ತಡೆಯದೆ ಅಂತ್ಯಗೊಂಡಿತು. ಹಂಪಿಯಲ್ಲಿದ್ದ ಅನೇಕ ಸ್ಮಾರಕಗಳನ್ನು ಸುಮಾರು ಆರು ತಿಂಗಳುಗಳ ಕಾಲ ಸೈನಿಕರು ನಾಶ ಮಾಡಿದರು ಎನ್ನುತ್ತದೆ ಇತಿಹಾಸ. ಇಂದು ವಿರೂಪಾಕ್ಷ ದೇವಾಲಯ, ಹಜಾರ ರಾಮ ದೇವಸ್ಥಾನ, ಸಪ್ತಸ್ವರ ಸಂಗೀತ ಹೊರಹೊಮ್ಮಿಸುವ ಕಲ್ಲಿನ ಕಂಬಗಳು, ವಿಶ್ವವಿಖ್ಯಾತ ಕಲ್ಲಿನ ರಥ, ಮಹಾನವಮಿ ದಿಬ್ಬ, ಸಾಸಿವೆಕಾಳು ಗಣಪತಿ, ಉಗ್ರನರಸಿಂಹ, ಕಮಲ ಮಹಲ್, ಬಡವಿ ಲಿಂಗ, ಅನೆ ಲಾಯ ಹೀಗೆ ಹಲವಾರು ಪ್ರೇಕ್ಷಣಿಯ ಸ್ಥಳಗಳನ್ನು ಹಂಪಿಯಲ್ಲಿ ನೋಡಬಹುದಾಗಿದೆ.
BREAKING NEWS : ವಿಧಾನಸಭೆ ಕಲಾಪ ನಾಳೆ ಬೆಳಗ್ಗೆ 10:30 ಕ್ಕೆ ಮುಂದೂಡಿಕೆ |Belagavi Winter Session 2022