ನವದೆಹಲಿ: ಐಸಿಐಸಿಐ ಬ್ಯಾಂಕ್-ವಿಡಿಯೋಕಾನ್ ಸಾಲ ವಂಚನೆ ಪ್ರಕರಣದಲ್ಲಿ ( ICICI bank-Videocon loan fraud case ), ಚಂದಾ ಕೊಚ್ಚಾರ್, ದೀಪಕ್ ಕೊಚ್ಚಾರ್ ಮತ್ತು ವಿ.ಎನ್.ಧೂತ್ ಅವರನ್ನು ಸಿಬಿಐ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈ ಮೂಲಕ ಜೈಲೇ ಗತಿ ಎನ್ನುವಂತೆ ಆಗಿದೆ.
ಸಿಬಿಐನಿಂದ ಕೆಲ ದಿನಗಳ ಹಿಂದೆ ಐಸಿಐಸಿಐ ಬ್ಯಾಂಕ್ ವೀಡಿಯೋ ಕಾನ್ ಸಾಲ ವಂಚನೆ ಪ್ರಕರಣದಲ್ಲಿ ಚಂದಾ ಕೊಚ್ಚಾರ್, ದೀಪಕ್ ಕೊಚ್ಚಾರ್ ಹಾಗೂ ವಿಎನ್ ಧೂತ್ ಅವರನ್ನು ಬಂಧಿಸಲಾಗಿತ್ತು.
ಈ ಸಂಬಂಧ ಇಂದು ಸಿಬಿಐ ವಿಶೇಷ ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸಿ, ಚಂದಾ ಕೊಚ್ಚಾರ್, ದೀಪಕ್ ಕೊಚ್ಚಾರ್ ಸೇರಿದಂತೆ ಮೂವರಿಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿ ಆದೇಶಿಸಿದೆ.
ICICI bank-Videocon loan fraud case | Special CBI court sends Chanda Kocchar, Deepak Kochhar and VN Dhoot to 14-day judicial custody.
— ANI (@ANI) December 29, 2022