ಹುಬ್ಬಳ್ಳಿ : ಕರ್ನಾಟಕದ ಕಳಸಾ ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. ಹೌದು, ಕೇಂದ್ರ ಜಲ ಆಯೋಗವು ಕರ್ನಾಟಕದ ಕಳಸಾ ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಅನುಮತಿ ನೀಡಿದೆ.
ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ಹಂಚಿಕೊಂಡಿದ್ದಾರೆ. ಕಳಸಾ ಭಂಡೂರಿ ಯೋಜನೆಯ ಅನುಮೋದನೆಗಾಗಿ ರಚನಾತ್ಮಕ ಯೋಜನಾ ವರದಿಯನ್ನು ನಿರೂಪಿಸಿದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ , ನಿಕಟಪೂರ್ವ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ನವರಿಗೆ ಹಾಗೂ ರಾಜ್ಯದ ನೀರಾವರಿ ಸಚಿವರಾದ ಗೋವಿಂದ ಕಾರಜೋಳ ಅವರಿಗೂ ಅನಂತ ಧನ್ಯವಾದಗಳು ಎಂದು ಹೇಳಿದ್ದಾರೆ. ಇನ್ನೂ, ಜನವರಿ 2 ರಂದು ಕಾಂಗ್ರೆಸ್ ಮಹದಾಯಿ ವಿಚಾರವಾಗಿ ಬೃಹತ್ ಸಮಾವೇಶ ನಡೆಸಲು ಸಿದ್ದತೆ ನಡೆಸಿತ್ತು, ಕಾಂಗ್ರೆಸ್ ಸಮಾವೇಶಕ್ಕೂ ಮುನ್ನವೇ ಯೋಜನೆ ವರದಿಗೆ ಅನುಮೋದನೆ ಸಿಕ್ಕಿದೆ.
ಕಳಸಾ ಬಂಡೂರಿ ಯೋಜನೆಗೆ ಈ ಹಿಂದೆ ನಾವು ಕೂಡಾ ಹೋರಾಟ ಮಾಡಿದ್ದೆವು, . ಇದೀಗ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಜೋಶಿ ಹೇಳಿದ್ದು, ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.
BIGG NEWS: ಕೇಸರಿಮಯವಾದ ಮಂಡ್ಯ; ಬಿಜೆಪಿ ಫ್ಲೆಕ್ಸ್ನಲ್ಲಿ ರಾರಾಜಿಸುತ್ತಿದೆ ಸುಮಲತಾ ಫೋಟೋ
BIGG NEWS: ವಿಧಾನಸಭೆಯಲ್ಲಿ 2022-23ನೇ ಸಾಲಿನ ಪೂರಕ ಬಜೆಟ್ ಮಂಡಿಸಿದ ಸಿಎಂ ಬೊಮ್ಮಾಯಿ