ಬೆಳಗಾವಿ : ಇದೀಗ ಸುವರ್ಣಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ಆರಂಭವಾಗಿದೆ. ಪಂಚಮಸಾಲಿ ಮತ್ತು ಒಕ್ಕಲಿಗರ ಮೀಸಲಾತಿ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.
ಪಂಚಮಸಾಲಿ ಮೀಸಲಾತಿ’ ಗೆ ಒತ್ತಾಯಿಸಿ ಪಂಚಮಸಾಲಿ ಸಮುದಾಯದ ಮುಖಂಡರು ಭಾರೀ ಪ್ರತಿಭಟನೆ ನಡೆಸಿದ್ದು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಬೊಮ್ಮಾಯಿ ಮಹತ್ವದ ನಿರ್ಧಾರ ಘೋಷಿಸಲಿದ್ದಾರೆ. ಪಂಚಮಸಾಲಿ ಹಾಗೂ ಒಕ್ಕಲಿಗ ಸಮುದಾಯಕ್ಕೆ ಪ್ರತ್ಯೇಕ ಪ್ರವರ್ಗ ರಚಿಸಿ ಮೀಸಲಾತಿ ನೀಡುವ ಸಂಬಂಧ ಚರ್ಚೆ ನಡೆಯುವ ಸಾಧ್ಯತೆ ಇದೆ.ಇನ್ನು ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಭೀತಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
3ಎ ಅಡಿಯಲ್ಲಿ ಒಕ್ಕಲಿಗ, ರೆಡ್ಡಿ, ಬಲಿಜ, ಬಂಟ, ಕೊಡವ ಸೇರಿ 12 ಜಾತಿಗಳಿವೆ. 3ಬಿ ಅಡಿಯಲ್ಲಿ ವೀರಶೈವ ಮತ್ತು ಲಿಂಗಾಯತ ಸಮುದಾಯಗಳು ಮತ್ತು ಉಪಜಾತಿಗಳನ್ನು ಶಿಫ್ಟ್ ಮಾಡುವ ಚಿಂತನೆ ನಡೆಯುತ್ತಿದೆ. ಇಡಬ್ಲ್ಯುಎಸ್ ಅಡಿ ರಾಜ್ಯಗಳಿಗೆ ಇರುವ ಅಧಿಕಾರ ಚಲಾಯಿಸಿ, ಪಂಚಸಾಲಿಗಳಿಗೆ ಶೇ4 ರಷ್ಟು ಮತ್ತು ಒಕ್ಕಲಿಗರಿಗೆ ಶೇ.3 ರಷ್ಟು ಮೀಸಲು ಮರು ಹಂಚಿಕೆ ಮಾಡುವ ಸಾಧ್ಯತೆ ಇದೆ.ಒಟ್ಟಿನಲ್ಲಿ ಸಂಪುಟ ಸಭೆ ಬಹಳಷ್ಟು ನಿರೀಕ್ಷೆ ಮೂಡಿಸಿದೆ.
BIGG NEWS : ‘ಸುಮಲತಾ’ ಬಿಜೆಪಿ ಸೇರ್ಪಡೆ ಕುರಿತು ‘ಸಿ.ಪಿ ಯೋಗೇಶ್ವರ್’ ಸ್ಪೋಟಕ ಹೇಳಿಕೆ
BREAKING NEWS : ಸುವರ್ಣಸೌಧದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ಆರಂಭ