ದಾವಣಗೆರೆ : ಚೀನಾ ಸೇರಿದಂತೆ ಹಲವು ವಿದೇಶಗಳಲ್ಲಿ ಕೊರೊನಾ ಹೊಸ ತಳಿ ಬಿಎಫ್.7 ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿ ಹರಡುವ ಭೀತಿ ಶುರುವಾಗುತ್ತಿದ್ದಂತೆ ಇದೀಗ ರಾಜ್ಯದ ದಾವಣಗೆರೆಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಹೆಚ್ಚಿದ ಆತಂಕ ಸೃಷ್ಟಿಯಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲ – ಸಚಿವ ಕೆ.ಗೋಪಾಲಯ್ಯ
ಕರ್ನಾಟದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಫುಲ್ ಅಲರ್ಟ್ ನಡುವೆಯೂ ಮತ್ತೊಂದು ಆತಂಕ ಶುರುವಾಗಿದೆ. ಕಳೆದ ನವೆಂಬರ್ ನಲ್ಲಿ ಒಂದು ಪಾಸಿಟಿವ್ ಪ್ರಕರಣ ದಾವಣಗೆರೆಯ ಜಿಲ್ಲೆಯಲ್ಲಿ ದಾಖಲಾಗಿತ್ತು. ಈ ಬೆನ್ನಲ್ಲೆ ಇದೀಗ ಜಗಳೂರಿನಲ್ಲಿ 74 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು. ಕೋವಿಡ್ ನಿಯಮದಂತೆ ಜಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲ – ಸಚಿವ ಕೆ.ಗೋಪಾಲಯ್ಯ
ಕೋವಿಡ್ ಸೋಂಕಿಗೆ ಒಳಪಟ್ಟ ವ್ಯಕ್ತಿಯ ಪ್ರಾಥಮಿಕ ಸಂಪರ್ಕಕ್ಕೆ 7 ಮಂದಿ ಹಾಗೂ ದ್ವಿತೀಯ ಸಂಪರ್ಕಕ್ಕೆ ಮೂರು ಜನ ಬಂದಿದ್ದು ಕಫದ ಮಾದರಿ ಸಂಗ್ರಹಿಸಲಾಗಿದೆ. ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ ರಾಘವನ್ ಮಾಹಿತಿ ನೀಡಿದ್ದಾರೆ. ಸೋಂಕಿತನ ಪತ್ನಿ ಮಾತ್ರ ಇದೇ ತಿಂಗಳು ತುಮಕೂರಿಗೆ ಹೋಗಿ ಬಂದಿರುವ ಮಾಹಿತಿ ಇದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದವರಿಗೆ ಅವರವರ ಮನೆಯಲ್ಲಿ ಪ್ರತ್ಯೇಕವಾಗಿರಲು ಸೂಚನೆ. ಈಗಾಗಲೇ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಾಗುತ್ತಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಎರಡು ಲಸಿಕೆ ಪಡೆಯಬೇಕೆಂದು ಎಚ್ಚರಿಕೆ ನೀಡಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲ – ಸಚಿವ ಕೆ.ಗೋಪಾಲಯ್ಯ