ಮಂಡ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಮತ್ತು ನಾಳೆ ರಾಜ್ಯದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಲ್ಲದೇ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
BIGG NEWS: ಕರ್ನಾಟಕ-ಮಹಾರಾಷ್ಟ್ರ ನಡುವಿನ ಗಡಿ ವಿವಾದ; ಇದು ಕನ್ನಡಿಗರಿಗೆ ಮಾಡು ಇಲ್ಲವೇ ಮಡಿ ಆಗಿದೆ; ದೇವೇಗೌಡರು
ಇದೀಗ ಬೆಂಗಳೂರಿನಲ್ಲಿ ಮಂಡ್ಯದತ್ತ ಹೊರಟಿದ್ದಾರೆ. ಹೆಲಿಕಾಪ್ಟರ್ ನಲ್ಲಿ ಮಂಡ್ಯಕ್ಕೆ ಅಮಿತಾ ಶಾ ತೆರಳುತ್ತಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಗಲವು ನಾಯಕರು ಅಮಿತ್ ಶಾ ಜೊತೆಗೆ ಪ್ರಯಾಣ ಮಾಡುತ್ತಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಗುರಿಯೊಂದಿಗೆ, ಇಂದು ಜೆಡಿಎಸ್ ಭದ್ರಕೋಟೆ ಎಂದೇ ಬಿಂಬಿದ ಮಂಡ್ಯದಿಂದ ತಮ್ಮ ಪ್ರವಾಸ ಪ್ರಾರಂಭಿಸಲಿದ್ದಾರೆ.ಇಂದು ಮಂಡ್ಯದಲ್ಲಿ ಮೆಗಾ ಡೈರಿ ಉದ್ಘಾಟಿಸಿದ ಬಳಿಕ, ಅಮಿತ್ ಶಾ ಅವರು, ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು, ಮಂಡ್ಯ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.