ಕೊಪ್ಪಳ: ವಿಧಾನಸಭೆ ಚುನಾವಣೆ ಇನ್ನೇನು ಹತ್ರ ಬರುತ್ತಿದೆ. ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಹೀಗಾಗಿ ಟಿಕೆಟ್ ಗಾಗಿ ಫೈಟಿಂಗ್ ಶುರುವಾಗಿದೆ.
ಮಾಜಿ ಸಚಿವ ಜನಾರ್ದನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಎಂಬ ಹೊಸ ಪಕ್ಷ ಕಟ್ಟಿ ಚುನಾವಣ ಕಣಕ್ಕೆ ಇಳಿದಿದ್ದಾರೆ. ಇದೀಗ ಕಾಂಗ್ರೆಸ್ ಕೆಲ ಮುಖಂಡರು ಕೆಆರ್ಪಿಪಿ ಸೇರ್ಪಡೆಯಾಗಿದ್ದಾರೆ.ಕುರುಬ, ಮುಸ್ಲಿಂ ಸಮುದಾಯದ ಮುಖಂಡರು ಮಾಜಿ ಸಚಿವ ಜನಾರ್ದನ ರೆಡ್ಡಿ ನೇತೃತ್ವದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಜನಾರ್ಧನರೆಡ್ಡಿಗೆ ಕಂಬಳಿ ಹಾಕಿ ಕುರುಬ ಸಮುದಾಯ ಮುಖಂಡರು ಸೇರ್ಪಡೆಗೊಂಡಿದ್ದಾರೆ.
ಈ ಮೂಲಕ ಸಿದ್ದರಾಮಯ್ಯನವರ ಬಲಗೈ ಬಂಟರಾಗಿರುವ ಇಕ್ಬಾಲ್ ಅನ್ಸಾರಿ ಅವರಿಗೆ ನಡುಕ ಹುಟ್ಟಿಸಿದ್ದಾರೆ.ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ಮಾಜಿ ಸಚಿವರಾದ ಇಕ್ಬಾಲ್ ಅನ್ಸಾರಿ, ಮಲ್ಲಿಮಾರ್ಜುನ ನಾಗಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯ ಎಚ್ ಆರ್ ಶ್ರೀನಾಥ್ ಅರ್ಜಿ ಸಲ್ಲಿಸಿದ್ದಾರೆ. ಆದರೆ ಇದರಲ್ಲಿ ಅನ್ಸಾರಿ ಹಾಗೂ ಶ್ರೀನಾಥ್ ಮಧ್ಯೆ ಫೈಪೋಟಿ ಶುರುವಾಗಿದೆ.