ಮೈಸೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲಿದೆ. ಯಾವುದೇ ಕಾರಣಕ್ಕೂ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರೋದಿಲ್ಲ. ಕಮಲದ ಆಯಸ್ಸು ಮುಗಿತ್ತಾ ಬಂತು, ಕಮಲ ಮುದುಡುತ್ತಿದೆ. ಜೆಡಿಎಸ್ ಎಲ್ಲಿ ಸ್ವತಂತ್ರವಾಗಿ ಅಧಿಕಾರಕ್ಕೆ ಬರುತ್ತೊ ಎಂಬುದಾಗಿ ಅಮಿತ್ ಶಾ ಹೆದರಿದ್ದಾರೆ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಂಕ್ರಾಂತಿ ನಂತರ ಅಭ್ಯರ್ಥಿಗಳ ಎರಡನೇ ಪಟ್ಟಿ ರಿಲೀಜ್ ಮಾಡುತ್ತೇನೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಜೆಡಿಎಸ್ ಬಗ್ಗೆ ಟೀಕೆ ಮಾಡಿದ್ರು. ನನ್ನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ಯಾವುದಾದರೂ ಒಂದು ಪ್ರಕರಣದಲ್ಲಿ ನಾಡಿನ ಸಂಪತ್ತುನ್ನು ಎಟಿಎಂ ಆಗಿ ದುರ್ಬಳಕೆ ಮಾಡಿಕೊಂಡಿದ್ದರೆ ರಾಜ್ಯದ ಜನತೆ ಮುಂದಿದೆ ಎಂದರು.
ಬಿಜೆಪಿಗೆ ಕರ್ನಾಟಕ ಎಟಿಎಂ ಆಗಿದೆ. ಅಮಿತ್ ಶಾ ಮಗ ಜೈ ಶಾಗೆ ಬಿಸಿಸಿಐನಲ್ಲಿ ಸ್ಥಾನ ಕೊಟ್ಟಿದ್ದೀರಲ್ಲ, ಜೈ ಶಾಗೆ ಏನು ಅರ್ಹತೆ ಇದೆ ಎಂದು ಪ್ರಶ್ನಿಸಿದಂತ ಅವರು, ಹೆಚ್.ಡಿ.ದೇವೇಗೌಡರ ಉಗುರಿಗೆ ಸಮ ಆಗಲ್ಲ. ದೇವೇಗೌಡರ ಬಗ್ಗೆ ಮಾರಾಡುವ ನೈತಿಕತೆ ಅಮಿತ್ ಶಾಗೆ ಇಲ್ಲ. ಕನ್ನಡಿಗರ ಎಟಿಎಂನ್ನು ಬಿಜೆಪಿ ಲೂಟಿ ಮಾಡಿದ್ದಾರೆ. ನಾನೇನು ಅರ್ಜಿ ಹಾಕಿಕೊಂಡು ಇವರ ಮನೆ ಮುಂದೆ ಹೋಗಿದ್ದೇನಾ? ನಾನು ಹೊಂದಾಣಿಕೆ ಮಾಡಿಕೊಳ್ಳಿ ಅಂತ ಕಾಂಗ್ರೆಸ್ ಮತ್ತು ಬಿಜೆಪಿ ಮನೆ ಬಾಗಿಲಿಗೆ ಹೋಗಿದ್ದೇನಾ.? ಎಂದು ಕಿಡಿಕಾರಿದರು.
123 ಸಂಖ್ಯೆ ದಾಟಲು ದಿನದ 20 ಗಂಟೆ ದುಡಿಯುತ್ತೇನೆ. ಜೆಡಿಎಸ್ ಪಕ್ಷದ ಬಗ್ಗೆ ಹೆದರಿಕೆ ಆರಂಭವಾಗಿದೆ. ಅದಕ್ಕೆ ಹೀಗೆ ಮಾತಾಡುತ್ತಿದ್ದಾರೆ. ಈ ತನಕ 800 ಜನರನ್ನು ಆಪರೇಷನ್ ಕಮಲ ಮಾಡಿದ್ದಾರೆ. ಅಮಿತ್ ಶಾ, ನನ್ನ ಪಕ್ಷ ಕೆಣಕಿದ್ದಾರೆ. ಕಾಂಗ್ರೆಸ್ ಜೊತೆ ಸರ್ಕಾರ ಮಾಡಿದ್ದಾಗ, ಫ್ರೆಶ್ ಆಗಿ ಎಲೆಕ್ಷನ್ ಗೆ ಹೋಗಿ ಅಂತ ಮೋದಿ ಹೇಳಿದ್ದರು ಎಂದರು.
ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಜೆಡಿಎಸ್ ಮನೆ ಬಾಗಿಲು ತಟ್ಟಿದ್ದಾರೆ. ಜೆಡಿಎಸ್ ಪವರ್ ಪುಲ್ ಆಗುತ್ತಿದೆ ಅಂತ ವಿಧಾನಸೌದದ ಮೊಗಸಾಲೆಯಲ್ಲಿ ಬಿಜೆಪಿ ಅವರೆ ಹೇಳುತ್ತಾರೆ. ಅಮಿತ್ ಶಾ ಐಟಿ, ಇಡಿ ತೆಗೆದುಕೊಂಡು ಬರಲಿ, ಐಟಿ, ಇಡಿ ಗದಾ ಪ್ರಹಾರದೊಂದಿಗೆ ಕರೆದುಕೊಂಡು ಬರಲಿ, ನಾನು ಹೆದರಲ್ಲ, ಏಕೆಂದರೆ ನಾನು ಸ್ವಚ್ಛವಾಗಿದ್ದೇನೆ. ಸಿಸೋಡಿಡಾ, ಕಸಿ ಎನ್ ಚಂದ್ರಶೇಖರ ಮೇಲೆ ಇದೇ ಗದಾ ಪ್ರಹಾರ ಮಾಡುತ್ತಿದ್ದಾರೆ. ಇಲ್ಲಿಗೂ ಬರಲಿ ನಾನೇನು ಹೆದರಲ್ಲ. ಭ್ರಷ್ಟ ಕುಟುಂಬ ಅಂತ ಹೇಳೋದಿಕ್ಕೆ ಯಾವುದಾದರೂ ನಿದರ್ಶನ ನೀಡಲಿ ಎಂದು ವಾಗ್ಧಾಳಿ ನಡೆಸಿದರು.
ನಮ್ಮ ಎಟಿಎಂ ಜನತೆಯ ಕಷ್ಟಕ್ಕೆ ಕೊಟ್ಟಿದ್ದೇವೆ. ಬಿಜೆಪಿಯವರ ಎಟಿಎಂ ಕ್ರಿಪ್ಟೊ ಕರೆನ್ಸಿ, ಡಾಲರ್ ಆಗಿದೆ. ಕಮಲದ ಏಜ್ ಮುಗಿತ್ತಾ ಬಂತು, ಕಮಲ ಮುದುಡುತ್ತಿದೆ. ಜೆಡಿಎಸ್ ಎಲ್ಲಿ ಸ್ವತಂತ್ರವಾಗಿ ಅಧಿಕಾರಕ್ಕೆ ಬರುತ್ತೊ ಎಂದು ಹೆದರಿದ್ದಾರೆ ಅಮಿತ್ ಶಾ. ಅಮಿತ್ ಶಾ ಡಬಲ್ ಸ್ಟ್ಯಾಂಡರ್ಡ್. 2023 ರಲ್ಲಿ ನಾವೇ ಸ್ವತಂತ್ರವಾಗಿ ಅಧಿಕಾರಕ್ಕೆ ಬರುತ್ತೇವೆ. ಯಾವುದೇ ಕಾಎಣಕ್ಕೂ ಸಮ್ಮಿಶ್ರ ಸರ್ಕಾರ ಬರಲ್ಲ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.
BIG NEWS: ಸಂಕ್ರಾಂತಿ ಬಳಿಕ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ – ಹೆಚ್ ಡಿ ಕುಮಾರಸ್ವಾಮಿ ಘೋಷಣೆ