ಬಳ್ಳಾರಿ: ಜನಾರ್ದನ ರೆಡ್ಡಿ ಹೊಸ ಪಕ್ಷ ಕಟ್ಟಿದ ವಿಚಾರವಾಗಿ ಸಾರಿಗೆ ಸಚಿವ ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ. ಸ್ನೇಹಿತ ಜನಾರ್ದನ ರೆಡ್ಡಿ ಪಕ್ಷ ಪ್ರಭಾವ ಬೀರಲ್ಲಾ. ರಾಮುಲು ಮುಖ ನೋಡಿ ಮತ್ತೊಬ್ಬರ ಮುಖ ನೋಡಿ ಮತ ಹಾಕಬೇಡಿ. ಮೈಸೂರು ಭಾಗ ಅಷ್ಟೇ ಅಲ್ಲಾ ಕಲ್ಯಾಣ ಕರ್ನಾಟಕ ಎಲ್ಲ ಭಾಗದಲ್ಲಿ ಬಿಜೆಪಿ ಪಕ್ಷ ಗೆಲ್ಲಲಿದೆ ಎಂದು ಹೇಳಿದ್ದಾರೆ.
BIGG NEWS: ಕುಂದಾನಗರಿಯಲ್ಲಿ ಮತ್ತೆ ರಕ್ತಪಾತ; ಗುಟ್ಕಾ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್ ಸೇರಿದಂತೆ ಯಾವುದೇ ಪ್ರಾದೇಶಿಕ ಪಕ್ಷ ಪರಿಣಾಮ ಬೀರದು ಎಂದರು.ಯಾವುದೇ ಪ್ರಾದೇಶಿಕ ಪಕ್ಷ ಪರಿಣಾಮ ಬೀರುವ ಮಾತೇ ಇಲ್ಲ. ಸ್ವಂತ ಬಲದಿಂದ ನಾವು 150 ಸ್ಥಾನ ಗೆಲ್ಲುತ್ತೇವೆ. ಪ್ರಮುಖವಾಗಿ ಉತ್ತರ ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷ ಪ್ರಭಾವ ಬೀರಲ್ಲ. ಬಳ್ಳಾರಿ ವಿಜಯನಗರ ಅವಳಿ ಜಿಲ್ಲೆಯ ಮೂರು ಸಾಮಾನ್ಯ ಕ್ಷೇತ್ರದಲ್ಲಿ ಆನಂದ್ ಸಿಂಗ್ , ಕರುಣಾಕರ್ ರೆಡ್ಡಿ, ಸೋಮಶೇಖರ್ ರೆಡ್ಡಿ ಗೆಲುತ್ತಾರೆ. ಹೀಗಂತ ಹೇಳುವ ಮೂಲಕ ಸ್ನೇಹಿತ ಜನಾರ್ದನ ರೆಡ್ಡಿ ಬಿಟ್ಟು, ಉಳಿದ ರೆಡ್ಡಿ ಸಹೋದರರ ಕಡೆ ರಾಮಲು ವಾಲಿದಂಗಿದೆ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರಾದರೂ ಪಕ್ಷ ಕಟ್ಟಬಹುದು, ಚುನಾವಣೆಯಲ್ಲಿ ಸ್ಪರ್ಧಿಸಬಹು. ಆದರೆ ಜನರ ಒಲವು, ಪಕ್ಷದ ಮೇಲೆ ಇದೆ. ದೇಶದ ಚುನಾವಣೆ ಮೋದಿ ಹಾಗೂ ರಾಜ್ಯದ ಚುನಾವಣೆ ಬಸವರಾಜ ಬೊಮ್ಮಾಯಿ ಹಾಗೂ ಬಿ ಎಸ್ ವೈ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದರು.