ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡ್ ದಾರರು ಅಲ್ಲದೇ ಸಹಕಾರಿ ಸಂಘಗಳಲ್ಲಿನ ಸದಸ್ಯರಿಗೂ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ವಿಸ್ತರಣೆ ಮಾಡಿದ್ದು. ಈ ಯೋಜನೆಯ ಅಡಿಯಲ್ಲಿ ಸದಸ್ಯರ ನೋಂದಣಿಗೆ ನೀಡಲಾಗಿದ್ದಂತ ಅವಧಿಯನ್ನು ಜನವರಿ 31ರವರೆಗೆ ವಿಸ್ತರಿಸಿ ಸರ್ಕಾರ ಆದೇಶಿಸಿದೆ. ಈ ಮೂಲಕ ಸಹಕಾರಿ ಸಂಘಗಗಳ ಸದಸ್ಯರಿಗೆ ಗುಡ್ ನ್ಯೂಸ್ ನೀಡಿದೆ.
ಈ ಸಂಬಂಧ ಸಹಕಾರ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2022-23ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿಯನ್ನು ದಿನಾಂಕ 01-11-2022 ರಿಂದ ದಿನಾಂಕ 31-12-2022ರವರೆಗೆ ನಿಗದಿಗೊಳಿಸಿ ಆದೇಶಿಸಲಾಗಿತ್ತು ಎಂದಿದ್ದಾರೆ.
ಆದ್ರೇ ಅನೇಕ ಸಹಕಾರ ಸಂಘಗಳ ಸದಸ್ಯರು, ಸಹಕಾರಿಗಳು ಸೇರಿದಂತೆ ಹಲವರು ಯೋಜನೆಯ ನೋಂದಣಿ ದಿನಾಂಕವನ್ನು ವಿಸ್ತರಿಸುವಂತೆ ಕೋರಿದ್ದರು. ಈ ಹಿನ್ನಲೆಯಲ್ಲಿ 2022-23ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿಯನ್ನು ದಿನಾಂಕ 31-01-2023ರವರೆಗೆ ವಿಸ್ತರಿಸಿ ಆದೇಶಿಸಿರೋದಾಗಿ ತಿಳಿಸಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ
ಬೆಚ್ಚಿಬಿದ್ದ ಬೆಂಗಳೂರು ಜನತೆ: ‘ಏರ್ ಪೋನ್’ಗಾಗಿ ಸ್ನೇಹಿತನ ಮೇಲೆ ಹಲ್ಲೆ ಮಾಡಿ ಕೊಲೆ