ಚಿತ್ರದುರ್ಗ: ಪೋಸ್ಕೋ ಕೇಸ್ ನಲ್ಲಿ ಮುರುಘಾ ಶರಣರು ಜೈಲು ಪಾಲಾದ ಬಳಿಕ, ಅವರನ್ನು ಮಲ್ಲಾಡಿಹಳ್ಳಿಯ ಅನಾಥ ಸೇವಾಶ್ರಮದ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿತ್ತು. ಈ ಬಳಿಕ ಇಂದು ನಡೆದಂತ ಸಮಿತಿಯ ಸಭೆಯಲ್ಲಿ ಕಾರ್ಯದರ್ಶಿಯನ್ನಾಗಿ ಮಾಜಿ ಶಾಸಕ ಎಸ್.ಕೆ ಬಸವರಾಜನ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಇಂದು ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ವಿಶ್ವಸ್ತರ ಸಭೆ ನಡೆಯಿತು. ಈ ಸಭೆಯಲ್ಲಿ ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಕಾರ್ಯದರ್ಶಿಯನ್ನಾಗಿ ಎಸ್.ಕೆ ಬಸವರಾಜನ್ ಅವರೋಧವಾಗಿ ಆಯ್ಕೆ ಮಾಡಲಾಗಿದೆ.
ಇನ್ನೂ ಖಜಾಂಚಿಯಾಗಿ ಜಿಎನ್ ಮಲ್ಲಿಕಾರ್ಜುನಪ್ಪ ಅವರನ್ನು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಹೀಗೆ ಆಯ್ಕೆಯಾದಂತ ಕಾರ್ಯದರ್ಶಿ, ಖಜಾಂಚಿಗಳು ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಬ್ಯಾಂಕ್ ಹಾಗೂ ಇತರೆ ವ್ಯವಹಾರಗಳನ್ನು ನೋಡಿಕೊಳ್ಳಲಿದ್ದಾರೆ.
BIGG NEWS : ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರ: ಜ.12 ಕ್ಕೆ ಹೈಕೋರ್ಟ್ ನಲ್ಲಿ ವಿಚಾರಣೆ
ಸರ್ಕಾರಿ ಉದ್ಯೋಗಿಗಳಿಗೆ ಗುಡ್ ನ್ಯೂಸ್ ; ‘ಫಿಟ್ಮೆಂಟ್’ ಸೇರಿ ‘ಡಿಎ, ಡಿಆರ್’ ಹೆಚ್ಚಳ, ಸ್ಯಾಲರಿ ಹೈಕ್