ವಿಜಯಪುರ : ನಡೆದಾಡುವ ದೇವರು ಎಂದು ಕರೆಯಲ್ಪಡುವ ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ (82) ದೈವಾಧೀನರಾಗಿದ್ದಾರೆ. ಈ ಹಿನ್ನೆಲೆ ವಿಜಯಪುರ ಜಿಲ್ಲೆಯಾದ್ಯಂತ ಜನವರಿ 3 ರ ಇಂದು ಶಾಲಾ, ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಿಲಾಗಿದೆ.
ಈ ಬಗ್ಗೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಸಿದ್ದೇಶ್ವರ ಸ್ವಾಮಿಗಳು ಶಿವೈಕ್ಯರಾಗಿದ್ದರಿಂದ ದಿನಾಂಕ 3-1-2023 ರಂದು ವಿಜಯಪುರ ಜಿಲ್ಲೆಯಲ್ಲಿ ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಿಲಾಗಿದೆ.
ಪೂಜ್ಯರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಮಾಜಿಕ ಅಂರತವನ್ನು ಕಾಪಾಡಿಕೊಂಡು ಕೋವಿಡ್-19 ಸರ್ಕಾರಿ ಮಾರ್ಗಸೂಚಿಗಳನ್ನು ಪಾಲಿಸಿ ನೆರವೇರಿಸಲು ರಾಜ್ಯ ಸರ್ಕಾರ ಆದೇಶಿಸಿದೆ.