ಬೆಂಗಳೂರು: ಯಶಸ್ವಿನಿ ಯೋಜನೆ ಯನ್ನು ಪರಿಷ್ಕರಿಸಿ ಮರು ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಇದೇ ವೇಳೆ ದಿನಾಂಕವನ್ನು ವಿಸ್ತರಣೆ ಮಾಡಿ ಆದೇಶವನ್ನು ಹೊರಡಿಸಿದೆ. ಅಂದ ಹಾಗೇ 2022-23ನೇ ಸಾಲಿಗೆ ಈ ಮುನ್ನ 2022ರ ಡಿಸೆಂಬರ್ 31 ಕಡೆಯ ದಿನವಾಗಿತ್ತು, ಆದರ ಈಗ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿಯನ್ನು ಈ ತಿಂಗಳಾಂತ್ಯದವರೆಗೆ ವಿಸ್ತರಿಸಲಾಗಿದೆ.
BIGG NEWS : ಸಿದ್ದೇಶ್ವರ ಶ್ರೀ ಲಿಂಗೈಕ್ಯ : ಇಂದು ವಿಜಯಪುರ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಹಲವು ಸಹಕಾರಿಗಳು, ಶಾಸಕರು, ವಿಧಾನಪರಿಷತ್ ಸದಸ್ಯರ ಕೋರಿಕೆ ಮೇರೆಗೆ ರಾಜ್ಯ ಸರ್ಕಾರ, ಜನವರಿ 31ರವರೆಗೆ ಹೊಸ ಸದಸ್ಯರನ್ನು ನೋಂದಾಯಿಸುವ ಅವಕಾಶ ವಿಸ್ತರಿಸಿದೆ ಎಂದು ಸಹಕಾರ ಇಲಾಖೆ, ಆದೇಶದಲ್ಲಿ ತಿಳಿಸಿದೆ. ಪ್ರಸಕ್ತ ಸಾಲಿಗೆ, 30 ಲಕ್ಷ ಸದಸ್ಯರನ್ನು ನೋಂದಾಯಿಸುವ ಗುರಿ ಹೊಂದಲಾಗಿದೆ. ಹೀಗಾಗಿ ಈ ಅವಧಿಯನ್ನು, ಒಂದು ತಿಂಗಳು ವಿಸ್ತರಿಸಿರುವುದಾಗಿ ಇಲಾಖೆ ಹೇಳಿದೆ.
ಅಂದ ಹಾಗೇ ಈ ಯೋಜನೆ ಅಡಿಯಲ್ಲಿ, ಈ ಯೋಜನೆಯಡಿ ಯಶಸ್ವಿನಿ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಒಂದು ಕುಟುಂಬಕ್ಕೆ 5 ಲಕ್ಷ ರೂ. ವರೆಗಿನ ವೆಚ್ಚದಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಬಹುದು. ರಾಜ್ಯ ಸರ್ಕಾರವು ಇದಕ್ಕಾಗಿ ಪ್ರಸಕ್ತ ಆಯವ್ಯಯದಲ್ಲಿ 300 ಕೋಟಿ ರೂ. ಅನುದಾನ ನಿಗದಿ ಪಡಿಸಿದೆ.
ಗ್ರಾಮೀಣ ಸಹಕಾರ ಸಂಘಗಳ, ಸ್ವ-ಸಹಾಯ ಗುಂಪುಗಳ ಗರಿಷ್ಟ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ವಾರ್ಷಿಕ ರೂ.500/- ಗಳ ವಂತಿಗೆ ಮತ್ತು ಹೆಚ್ಚುವರಿ ಪ್ರತಿಯೊಬ್ಬ ಸದಸ್ಯರಿಗೆ ರೂ.100/-ಗಳನ್ನು ಪಾವತಿಸಬೇಕು. ನಗರ ಸಹಕಾರ ಸಂಘಗಳ ಗರಿಷ್ಠ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ರೂ.1,000/- ಗಳ ವಂತಿಗೆ ಮತ್ತು ಹೆಚ್ಚುವರಿ ಪ್ರತಿಯೊಬ್ಬ ಸದಸ್ಯರಿಗೆ ರೂ.200/- ಗಳನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರಿಗೆ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಸಹಾಯಧನ ನೀಡುವ ಮೂಲಕ ಅವರ ವಾರ್ಷಿಕ ಸದಸ್ಯತ್ವದ ವಂತಿಗೆಯನ್ನು ಸರ್ಕಾರವೇ ಭರಿಸುತ್ತದೆ.