ವಿಜಯಪುರ : ನಡೆದಾಡುವ ದೇವರೆಂದೇ ಖ್ಯಾತರಾದ ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಮಹಾಸ್ವಾಮಿಗಳು ಅಸ್ತಂಗತರಾಗಿದ್ದಾರೆ. ಶ್ರೀಗಳ ಪಾರ್ಥಿವ ಶರೀರದ ದರ್ಶನಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ದರ್ಶನಕ್ಕೆ ಬರುವ ಭಕ್ತರಿಗೆ ನಗರದ ಪೆಟ್ರೋಲ್ ಮತ್ತು ಡೀಸೆಲ್ ಬಂಕ್ಗಳಲ್ಲಿ ಊಟದ ವ್ಯವಸ್ಥೆಕಲ್ಪಿಸಲಾಗಿದೆ.
BREAKING NEWS: ಸಿದ್ದೇಶ್ವರ ಶ್ರೀಗಳ ಅಗಲಿಕೆಗೆ ಹೊಳೆ ಆಲೂರಿನಲ್ಲಿ ಅಂಧ, ಬುದ್ಧಿಮಾಂದ್ಯ ಮಕ್ಕಳಿಂದ ಸಂತಾಪ
ಸಿದ್ದೇಶ್ವರ ಶ್ರೀಗಳು ಸೋಮವಾರ ಸಂಜೆ ನಿಧನ ಹೊಂದಿದ್ದರು. ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಇಂದು ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ನಿರ್ಧರಿಸಲಾಗಿದೆ. ಇದೀಗ ಜ್ಞಾನಯೋಗಾಶ್ರಮದಲ್ಲಿ ಪಾರ್ಥಿವ ಶರೀರವನ್ನು ಸೈನಿಕ ಶಾಲೆ ಆವರಣಕ್ಕೆ ತಂದು ಸಾರ್ವಜನಿಕರ ದರ್ಶನಕ್ಕೆ ಅಂತಿಮ ದರ್ಶನಕ್ಕೆ ಇಡಲಾಗಿದೆ. ಸಂಜೆ 5 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ.
BREAKING NEWS: ಸಿದ್ದೇಶ್ವರ ಶ್ರೀಗಳ ಅಗಲಿಕೆಗೆ ಹೊಳೆ ಆಲೂರಿನಲ್ಲಿ ಅಂಧ, ಬುದ್ಧಿಮಾಂದ್ಯ ಮಕ್ಕಳಿಂದ ಸಂತಾಪ
ಪಾರ್ಥಿವ ಶರೀರದ ದರ್ಶನಕ್ಕಾಗಿ ಹೊರ ರಾಜ್ಯಗಳಿಂದಲೂ ಭಕ್ತ ಸಾಗರವೇ ಹರಿದು ಬರುತ್ತಿದೆ. ಅಂತಿಮ ದರ್ಶನಕ್ಕೆ ಬರುವ ಜನರಿಗೆ ಅನುಕೂಲವಾಗಲೆಂದು ಪೆಟ್ರೋಲಿಯಂ ಅಸೋಸಿಯೇಷನ್ ವತಿಯಿಂದ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ವಿಜಯಪುರ ಜಿಲ್ಲಾ ಪೆಟ್ರೋಲಿಯಂ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಅರುಣ ಹುಂಡೇಕರ ಮತ್ತು ಕರ್ನಾಟಕ ರಾಜ್ಯ ಪೆಟ್ರೋಲಿಯಂ ಅಸೋಸಿಯೇಷನ್ ಉಪಾಧ್ಯಕ್ಷ ದಾದು ತಿವಾರಿ ಮಾಹಿತಿ ನೀಡಿದ್ದಾರೆ
BREAKING NEWS: ಸಿದ್ದೇಶ್ವರ ಶ್ರೀಗಳ ಅಗಲಿಕೆಗೆ ಹೊಳೆ ಆಲೂರಿನಲ್ಲಿ ಅಂಧ, ಬುದ್ಧಿಮಾಂದ್ಯ ಮಕ್ಕಳಿಂದ ಸಂತಾಪ