ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಇಂದು ಸಂಜೆ 5 ಗಂಟೆಗೆ ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ ನಡೆಯಲಿದೆ.
ಜ್ಞಾನಯೋಗಾಶ್ರಮದ ಆವರಣದಲ್ಲಿ ಸ್ವಾಮೀಜಿಗಳ ಅಂತ್ಯಸಂಸ್ಕಾರ ನಡೆಯಲಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದ್ದು, ಸ್ವಾಮೀಜಿ ಅಪೇಕ್ಷೆಯಂತೆಯೇ ಅಂತ್ಯಕ್ರಿಯೆ ನಡೆಯಲಿದೆ.ಸದ್ಯ ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂಜಾನೆಯಿಂದಲೇ ಸಾವಿರಾರು ಭಕ್ತರು ಆಗಮಿಸಿ ಅಂತಿಮ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
BIGG NEWS: ಸಿದ್ದೇಶ್ವರ ಶ್ರೀಗಳ ಅಗಲಿಕೆಯಿಂದ ಭಕ್ತಸಮೂಹಕ್ಕೆ ಆಘಾತ; ನಳಿನ್ಕುಮಾರ್ ಕಟೀಲ್
ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಮುಖ್ಯದ್ವಾರದ ಮೂಲಕ ಆಗಮಿಸಿ 2ನೇ ಗೇಟ್ನಲ್ಲಿ ನಿರ್ಗಮನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಗಣ್ಯರು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಮಹಿಳೆಯರು, ಮಕ್ಕಳು ಸೇರಿದಂತೆ ಸಾಗರೋಪಾದಿಯಲ್ಲಿ ಬೆಳಂಬೆಳಗ್ಗೆ ಭಕ್ತರ ದಂಡು ಹರಿದು ಬರುತ್ತಿದೆ. ನಸುಕಿನ ಜಾವವೇ ಅಂತಿಮ ದರ್ಶನಕ್ಕೆ ಭಕ್ತಾದಿಗಳು ಹಾಕಿದ ಕಾರಿಡಾರ್ ಸಂಪೂರ್ಣ ಭರ್ತಿಯಾಗಿದೆ.ಬಿಜ್ಜರಗಿ ಗ್ರಾಮದಿಂದ ಹೊರಡಲು ಬಸ್, ಕ್ರೂಸರ್ಗಳ ವ್ಯವಸ್ಥೆ ಮಾಡಲಾಗಿದೆ. ಶ್ರೀಗಳ ಅಂತಿಮ ದರ್ಶನಕ್ಕೆ ಬರುವ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಕೂಡ ಮಾಡಲಾಗಿದೆ.
BIGG NEWS: ಸಿದ್ದೇಶ್ವರ ಶ್ರೀಗಳ ಅಗಲಿಕೆಯಿಂದ ಭಕ್ತಸಮೂಹಕ್ಕೆ ಆಘಾತ; ನಳಿನ್ಕುಮಾರ್ ಕಟೀಲ್