ದಾವಣಗೆರೆ : 2022-23ನೇ ಸಾಲಿನ ವಿಕಲಚೇತನ ವಿದ್ಯಾರ್ಥಿಗಳು ಪ್ರೀ-ಮೆಟ್ರಿಕ್ ಮತ್ತು ಪೋಸ್ಟ್-ಮೆಟ್ರಿಕ್ ವಿದ್ಯಾರ್ಥಿವೇತನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರ ವಿದ್ಯಾರ್ಥಿವೇತನವನ್ನು ಆನ್ಲೈನ್ ಮೂಲಕ ಶಾಲಾ/ಕಾಲೇಜುಗಳ ನೋಂದಣಿ ಸಂಖ್ಯೆ ಹಾಗೂ ಯು.ಡಿ.ಐ.ಡಿ ಸಂಖ್ಯೆಗಳ ಮೂಲಕ ಫಲಾನುಭವಿಯು ಹೊಂದಿರುವ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ನಮೂದಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜನವರಿ 15 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ನ್ನು ವೀಕ್ಷಿಸಬಹುದು ಎಂದು ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಕೆ.ಕೆ ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BIGG NEWS : `ಲವ್ ಜಿಹಾದ್’ ತಡೆಗೆ ಮಹತ್ವದ ಕ್ರಮ : ಸಹಾಯವಾಣಿ ಆರಂಭಿಸಿದ ಹಿಂದೂಪರ ಸಂಘಟನೆಗಳು!