ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಸದ್ಯ ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂಜಾನೆಯಿಂದಲೇ ಸಾವಿರಾರು ಭಕ್ತರು ಆಗಮಿಸಿ ಅಂತಿಮ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಈ ವೇಳೆ ಭಕ್ತರು ಶ್ರೀಗಳ ದರ್ಶನ ಪಡೆದು ಇಡೀ ಕರುನಾಡೇ ಕಂಬನಿ ಮಿಡಿದಿದೆ.ಶ್ರೀಗಳ ಅಂತಿಮ ದರ್ಶನಕ್ಕೆ ಸಾವಿರಾರು ಭಕ್ತರ ಆಗಮಿಸಿದ್ದಾರೆ.
ಪ್ರತಿ ಮೂಲೆ ಮೂಲೆ, ಹಳ್ಳಿಗಳಿಂದಲೂ ಜನರು ಆಗಮಿಸುತ್ತಿದ್ದಾರೆ. ಇನ್ನು ಅಪಾರ ಸಂಖ್ಯೆ ಜನರು ಬರುವ ಸಾಧ್ಯತೆ ಇದೆ. ಇನ್ನು ಇಂದು ಸಂಜೆ 5 ಗಂಟೆಗೆ ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ ನಡೆಯಲಿದೆ. ಜ್ಞಾನಯೋಗಾಶ್ರಮದ ಆವರಣದಲ್ಲಿ ಸ್ವಾಮೀಜಿಗಳ ಅಂತ್ಯಸಂಸ್ಕಾರ ನಡೆಯಲಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದ್ದು, ಸ್ವಾಮೀಜಿ ಅಪೇಕ್ಷೆಯಂತೆಯೇ ಅಂತ್ಯಕ್ರಿಯೆ ನಡೆಯಲಿದೆ.
BIGG NEWS: ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣ; ನಿವಾಸಕ್ಕೆ ಕಾಂಗ್ರೆಸ್ ನಾಯಕರು ಭೇಟಿ, ಸಾಂತ್ವನ