ವಿಜಯಪುರ : ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನ ಮುಗಿಯದಿದ್ಗರೇ ನಾಳೆಯೂವಿಸ್ತರಣೆ ಮಾಡಲಾಗುತ್ತದೆ. ವಿಜಯಪುರ ಡಿ.ಸಿ ವಿಜಯ್ ಮಹಾಂತೇಶ್ ಆದೇಶ ನೀಡಿದ್ದಾರೆ
ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ.ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ ಇನ್ನೊಂದೆಡೆ ಶ್ರೀಗಳ ದರ್ಶನಕ್ಕೆ ಓಡಿಕೊಂಡು ಬರುತ್ತಿದ್ದಾರೆ. ಆ ಕಾರಣಕ್ಕಾಗಿ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನ ಮುಗಿಯದಿದ್ರೆ ನಾಳೆವರೆಗೂ ವಿಸ್ತರಣೆ ಮಾಡಲಾಗುತ್ತದೆ ಎಂದು ವಿಜಯಪುರ ಡಿಸಿ ವಿಜಯ್ ಮಹಾಂತೇಶ್ ಆದೇಶ ಹೊರಡಿಸಿದ್ದಾರೆ.
ಯಾರು ಆತಂಕ ಪಡುವ ಅಗತ್ಯವಿಲ್ಲ. ಓಡಿಕೊಂಡು ಬರುವ ಅಗತ್ಯವಿಲ್ಲ. ಎಲ್ಲರಿಗೂ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಅಂತಿಮ ದರ್ಶನ ಮುಗಿಯದಿದ್ಗರೇ ನಾಳೆಯೂವಿಸ್ತರಣೆ ಮಾಡಲಾಗುತ್ತದೆ. ಈಗಾಗಲೇ 15 ಲಕ್ಷ ಜನರು ಬಂದು ಶ್ರೀಗಳ ದರ್ಶನ ಪಡೆದಿದ್ದಾರೆ ಎಂದಿದ್ದಾರೆ