ವಿಜಯಪುರ : ನಾಳೆಯವರೆಗೂ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ವಿಜಯಪುರ ಡಿಸಿ ಮಹಾಂತೇಶ್ ಹೇಳಿದ್ದಾರೆ.
ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ.ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಈ ಹಿನ್ನೆಲೆ ಭಕ್ತರಲ್ಲಿ ವಿಜಯಪುರ ಡಿಸಿ ಮಹಾಂತೇಶ್ ಮನವಿ ಮಾಡಿದ್ದು, ಇಂದು ಅಂತಿಮ ದರ್ಶನ ಮುಗಿಯದಿದ್ದರೆ ನಾಳೆವರೆಗೂ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಗಡಿಬಿಡಿ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.
ಈಗಾಗಲೇ 15 ಲಕ್ಷ ಜನರು ಬಂದು ಶ್ರೀಗಳ ದರ್ಶನ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಶ್ರೀಗಳ ಅಂತಿಮ ದರ್ಶನಕ್ಕೆ ಲಕ್ಷಾಂತರ ಮಂದಿ ಭಕ್ತರು ಆಗಮಿಸಿದ್ದಾರೆ. ಪ್ರತಿ ಮೂಲೆ ಮೂಲೆ, ಹಳ್ಳಿಗಳಿಂದಲೂ ಜನರು ಆಗಮಿಸುತ್ತಿದ್ದಾರೆ. ಇನ್ನು ಅಪಾರ ಸಂಖ್ಯೆ ಜನರು ಬರುವ ಸಾಧ್ಯತೆ ಇದೆ.
‘ಸಿದ್ದೇಶ್ವರ ಶ್ರೀಗಳ ಅಂತ್ಯ ಸಂಸ್ಕಾರಕ್ಕೆ ಕಾಂಗ್ರೆಸ್ ಪಕ್ಷದ ಪರವಾಗಿ ನಾನು ಹೋಗುತ್ತಿದ್ದೇನೆ -ಡಿ.ಕೆ ಶಿವಕುಮಾರ್
BREAKING NEWS : ‘ಸಿದ್ದೇಶ್ವರ ಶ್ರೀ’ಗಳ ಅಂತಿಮ ದರ್ಶನಕ್ಕೆ ನೂಕು ನುಗ್ಗಲು : ಜನರನ್ನು ನಿಯಂತ್ರಿಸಲು ಪೊಲೀಸರ ಹರಸಾಹಸ