ವಿಜಯಪುರ : ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನವನ್ನು ಸಿಎಂ ಬೊಮ್ಮಾಯಿ ಪಡೆದ ಬಳಿಕ ಮಾತನಾಡಿ, ʻಸರ್ಕಾರಿ ಗೌರವದ ಬಳಿಕವೂ ಭಕ್ತರಿಗೆ ದರ್ಶನಕ್ಕೆ ಅವಕಾಶ ಇರುತ್ತೆ ʼಎಂದಿದ್ದಾರೆ
ಶ್ರೀಗಳ ಅಂತಿಮ ದರ್ಶನ ಪಡೆದ ಬಳಿಕ ಸಿಎಂ ಬೊಮ್ಮಾಯಿ ಮಾತನಾಡಿ ಅಪಾರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತಾಧಿಗಳಲ್ಲಿ ಒಂದು ಮನವಿ ಮಾಡಿಕೊಳ್ಳುತ್ತೇವೆ. ಪೂಜ್ಯರು ಹಾಗೂ ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಹಿನ್ನೆಲೆ. ಸರ್ಕಾರಿ ಗೌರವದ ಬಳಿವೂ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಭಕ್ತರು ಯಾರು ಆತಂಕ ಪಡುವ ಅಗತ್ಯವಿಲ್ಲ .ಈ ವೇಳೆ ಶಾಂತಿ, ಶಿಸ್ತಿನ ಮೂಲಕ ದರ್ಶನ ಪಡೆದುಕೊಂಡು ಮುಂದುವರಿಯಬೇಕೆಂದು ಕೇಳುತ್ತೇನೆ ಎಂದು ಮನವಿ ಮಾಡಿದ್ದಾರೆ