ನವದೆಹಲಿ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಮತ್ತೊಮ್ಮೆ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನ ಸೇರಿಕೊಂಡಿದ್ದಾರೆ. ಫ್ರಾಂಚೈಸಿ ಈ ಬಾರಿ ಅವರಿಗೆ ದೊಡ್ಡ ಸ್ಥಾನವನ್ನು ನೀಡಿದ್ದು, ಗಂಗೂಲಿ ಫ್ರಾಂಚೈಸಿಯ ಮೂರು ತಂಡಗಳಿಗೆ ನಿರ್ದೇಶಕರಾಗಿರುತ್ತಾರೆ. ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ಇತರ ಎರಡು ತಂಡಗಳು ಇಂಟರ್ನ್ಯಾಷನಲ್ ಲೀಗ್ ಟಿ20 (ILT20) ಮತ್ತು ಎಸ್ಎ ಟಿ 20 (ILT20)ನಲ್ಲಿವೆ.
ಗಂಗೂಲಿ ಕಳೆದ ವರ್ಷ ಅಕ್ಟೋಬರ್ನಲ್ಲಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್ ಜೊತೆ ಕೆಲಸ ಮಾಡಿದ್ದರು. ಅದ್ರಂತೆ, ಗಂಗೂಲಿ 2019ರಲ್ಲಿ ತಂಡದ ಮಾರ್ಗದರ್ಶಕರಾಗಿದ್ದರು. ಈ ಬಾರಿ ಅವರು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಇಂಟರ್ನ್ಯಾಷನಲ್ ಲೀಗ್ ಟಿ20 ತಂಡ ದುಬೈ ಕ್ಯಾಪಿಟಲ್ಸ್ ಮತ್ತು ಎಸ್ಎ ಟಿ20 ತಂಡ ಪ್ರಿಟೋರಿಯಾ ಕ್ಯಾಪಿಟಲ್ಸ್ಗೆ ನಿರ್ದೇಶಕರಾಗಿದ್ದಾರೆ.
BIGG NEWS: ಅರುಣಾಚಲ ಪ್ರದೇಶದಲ್ಲಿ 724 ಕೋಟಿ ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಕೇಂದ್ರ ಸಚಿವ ರಾಜನಾಥ್ ಸಿಂಗ್
BIGG NEWS: ಸಿದ್ದೇಶ್ವರ ಸ್ವಾಮೀಜಿ ತಂಗುತ್ತಿದ್ದ ತಪೋವನದಲ್ಲಿ ನಿರವಮೌನ
ವಿಧಾನಸಭಾ ಚುನಾವಣೆಗೆ ಮುನ್ನವೇ ಸಿದ್ದರಾಮಯ್ಯ ಜೈಲಿಗೆ ಹೋಗುತ್ತಾರೆ – ನಳೀನ್ ಕುಮಾರ್ ಕಟೀಲ್ ಭವಿಷ್ಯ