ಬೆಂಗಳೂರು : ಕಾಂತಾರ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ ಚಿತ್ರ. ಪರಭಾಷಿಗರು ಕನ್ನಡದ ಕಾಂತಾರ ಸಿನಿಮಾವನ್ನು ಬೆರಗುಗಣ್ಣಿನಿಂದ ನೋಡಿದ್ದಾರೆ. ಈ ಸಿನಿಮಾದಲ್ಲಿ ಫಾರೆಸ್ಟ್ ಆಫೀಸರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟ ಕಿಶೋರ್ ಇದೀಗ ಸುದ್ದಿಯಲ್ಲಿದ್ದಾರೆ.
ತಮಗೆ ಅನಿಸಿದ್ದು ತೋಚಿದ್ದನ್ನು ಕಿಶೋರ್ ಸೋಶೀಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಹಲವರು ಮೆಚ್ಚುಗೆ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಕಿಶೋರ್ ಟ್ವೀಟ್ ಗೆ ಕಿಡಿಕಾರಿದ್ದಾರೆ.
ಏನಿದು ಕಿಶೋರ್ ಟ್ವೀಟ್..?
ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ??
ಕಾಂತಾರದ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು ಅನ್ನೊ ವೈರಲ್ ವಿಡಿಯೊ ವಾಟ್ಸಾಪಿನಲ್ಲಿ ಹರಿದು ಬಂತು.ಆ ಸಿನಿಮಾದ ಭಾಗವಾಗಿ ಈ ಥರದ ತಪ್ಪು ತಿಳುವಳಿಕೆಗಳನ್ನು ತಿದ್ದುವುದು ನನ್ನ ಬಾಧ್ಯತೆ ಎಂದು ನಂಬಿ ಬರೆಯುತ್ತಿದ್ದೇನೆ.ಕೊಲ್ಲುವ ಶಕ್ತಿಯಿರುವ ದೈವಕ್ಕೆ ಅದರ ಬದಲು ಮನಃಪರಿವರ್ತನೆ ಮಾಡುವ ಶಕ್ತಿ ಏಕೆ ಏಕೆ ಇರುವುದಿಲ್ಲ?ಏಕೆಂದರೆ ಕತೆಗಾರನಿಗೆ ಕಥೆ ಮುಂದೆ ಸಾಗುವುದಿಲ್ಲ.
ಅವನ ಮಟ್ಟಿಗೆ ಒಂದು ಕಥೆಯನ್ನು ಪರಿಣಾಮಕಾರಿಯಾಗಿ ಹೇಳುವ ತನ್ನ ಉದ್ದೇಶ ಸಾಧನೆಗೆ ದೈವವೊ, ದೆವ್ವವೊ ಒಂದು ಸಾಧನವಷ್ಟೆ, ಸಿನಿಮಾವಾಗಲಿ ಪುರಾಣವಾಗಲಿ.ದೈವವೋ ದೆವ್ವವೋ ನಮ್ಮ ನಮ್ಮ ನಂಬಿಕೆಯಷ್ಟೇ. ನಂಬಿದರೆ ಉಂಟು ನಂಬದಿದ್ದರೆ ಇಲ್ಲ. ಹಾಗೆಂದು ಕಷ್ಟಕಾಲದಲ್ಲಿ ಮನಸ್ಥೈರ್ಯ ಕೊಡುವ ನಂಬಿಕೆಗಳನ್ನು ಅವಮಾನಿಸುವ ಅವಶ್ಯಕತೆಯೂ ಇಲ್ಲ. ಕಿಡಿಗೇಡಿಗಳನ್ನು ಶಿಕ್ಷಿಸಲು ಕಾನೂನಿದೆ. ಅವರವರ ನಂಬಿಕೆ ಅವರಿಗೆ. ನಂಬಿಕೆ ಇರಲಿ ಮೂಢನಂಬಿಕೆ ಬೇಡ.ಅದರ ಹೆಸರಲ್ಲಿ ದ್ವೇಷವೂ ಬೇಡ ಎಂದು ಬರೆದುಕೊಂಡಿದ್ದಾರೆ.
ಶಿವಮೊಗ್ಗ: ಜ.6ರಂದು ನಗರದ ಈ ಪ್ರದೇಶಗಲ್ಲಿ ವಿದ್ಯುತ್ ವ್ಯತ್ಯಯ | Power Cut