ಬೆಂಗಳೂರು: ಕೆಪಿಟಿಸಿಎಲ್ ನಲ್ಲಿ ಖಾಲಿ ಇದ್ದಂತ ವಿವಿಧ ಹುದ್ದೆಗಳ ( KPTCL Recruitment ) ಭರ್ತಿಗೆ ಕೆಇಎ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಸಿವಿಲ್ ಸಹಾಯಕ ಅಭಿಯಂತರರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಪರೀಕ್ಷೆ ಕೂಡ ನಡೆಸಲಾಗಿತ್ತು. ಇದೀಗ ಪರೀಕ್ಷೆಯ ಬಳಿಕ ಇಂದು ಅಭ್ಯರ್ಥಿಗಳು ಗಳಿಸಿದಂತ ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಇಂಧನ ಸಚಿವ ಸುನೀಲ್ ಕುಮಾರ್ ( Minister Sunil Kumar ) ಅವರು, ಕೆ.ಪಿ.ಟಿ.ಸಿ.ಎಲ್ ನಲ್ಲಿ ವಿವಿಧ ಹುದ್ದೆಗಳಿಗಾಗಿ ನಡೆದ ನೇರ ನೇಮಕಾತಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳಿಗೂ ಹಾರ್ದಿಕ ಅಭಿನಂದನೆಗಳು. ನಿಮ್ಮ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭ ಹಾರೈಸಿದ್ದಾರೆ.
ಕೆ.ಪಿ.ಟಿ.ಸಿ.ಎಲ್ ನಲ್ಲಿ ವಿವಿಧ ಹುದ್ದೆಗಳಿಗಾಗಿ ನಡೆದ ನೇರ ನೇಮಕಾತಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳಿಗೂ ಹಾರ್ದಿಕ ಅಭಿನಂದನೆಗಳು. ನಿಮ್ಮ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭ ಹಾರೈಸುತ್ತೇನೆ. ಫಲಿತಾಂಶವನ್ನು ತಿಳಿಯಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ. https://t.co/cVX61TJ4m7
— Sunil Kumar Karkala (@karkalasunil) January 3, 2023
ಇನ್ನೂ ಕೆಪಿಟಿಸಿಎಲ್ ನ ಸಹಾಯಕ ಅಭಿಯಂತರರು ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ಪರೀಕ್ಷೆಗೆ ಹಾಜರಾದಂತ ಅಭ್ಯರ್ಥಿಗಳು ಫಲಿತಾಂಶವನ್ನು https://cetonline.karnataka.gov.in/kea/kptcl2022 ಲಿಂಕ್ ನಲ್ಲಿ ಕ್ಲಿಕ್ ಮಾಡುವ ಮೂಲಕ ವೀಕ್ಷಿಸಬಹುದಾಗಿದೆ.
BREAKING NEWS: ಅಗಲಿದ ಸಿದ್ದೇಶ್ವರ ಶ್ರೀಗಳಿಗೆ ಸಕಲ ಸರ್ಕಾರಿ ಗೌರವ ಸಲ್ಲಿಕೆ: ಅಂತಿಮ ನಮನ ಸಲ್ಲಿಸಿದ ಸಿಎಂ ಬೊಮ್ಮಾಯಿ
BIGG NEWS : ಜನವರಿ ಅಂತ್ಯದ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಸಿದ್ದರಾಮಯ್ಯ